Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಚನ್ನಪಟ್ಟಣ ಅವಳಿ ನಗರ ಎಂದು ಘೋಷಿಸಿದ ಮುಖ್ಯಮಂತ್ರಿ, ನಾಲ್ಕು ತಿಂಗಳಲ್ಲಿ ಚನ್ನಪಟ್ಟಣ ಚಿತ್ರಣ ಬದಲು

Posted date: 17 Jun, 2019

Powered by:     Yellow and Red

ರಾಮನಗರ ಚನ್ನಪಟ್ಟಣ ಅವಳಿ ನಗರ ಎಂದು ಘೋಷಿಸಿದ ಮುಖ್ಯಮಂತ್ರಿ, ನಾಲ್ಕು ತಿಂಗಳಲ್ಲಿ ಚನ್ನಪಟ್ಟಣ ಚಿತ್ರಣ ಬದಲು

ಚನ್ನಪಟ್ಟಣ: ರಾಮನಗರ ಮತ್ತು ಚನ್ನಪಟ್ಟಣ ನಗರಗಳೆರಡನ್ನು ಒಟ್ಟಿಗೆ ಸೇರಿಸಿ ಅವಳಿ ನಗರಗಳನ್ನಾಗಿ ಮಾಡಿ ಅಭಿವೃದ್ಧಿ ಮಾಡಲಾಗುವುದು, ಇನ್ನು ನಾಲ್ಕು ತಿಂಗಳ ಅವಧಿಯಲ್ಲಿ ಚನ್ನಪಟ್ಟಣ ದ ಚಿತ್ರಣವನ್ನೇ ಬದಲಾಯಿಸುತ್ತೇನೆ ಎಂದು ರಾಜ್ಯದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಎರಡು ದಿನಗಳ ಚನ್ನಪಟ್ಟಣ ಭೇಟಿಯ ಸಮಯದಲ್ಲಿ ಅಕ್ಕೂರು, ಕೋಡಂಬಳ್ಳಿ ಮತ್ತು ಹೊಂಗನೂರು ಜಿಲ್ಲಾ ಪಂಚಾಯತಿಯ ಹಲವು ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.


೭೦೦ ಕೋಟಿ ವೆಚ್ಚದಲ್ಲಿ ರಾಜೀವ್ ಗಾಂಧಿ ಆಸ್ಪತ್ರೆ ಮತ್ತು ಕಾಲೇಜಿನ ಕಾಮಗಾರಿಯನ್ನು ಶೀಘ್ರವಾಗಿ ಆರಂಭಗೊಳಿಸುತ್ತೇವೆ, ಸ್ಥಳೀಯರಿಗೆ ಉದ್ಯೋಗವಕಾಶದ ಜೊತೆಗೆ ಎಲ್ಲಾ ಆರೋಗ್ಯ ಭಾಗ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.


೩೩೦ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸತ್ತೇಗಾಲದಿಂದ ಇಗ್ಗಲೂರು ದೇವೇಗೌಡ ಬ್ಯಾರೇಜ್ ಗೆ ನೀರು ತಂದು ಶೇಖರಿಸಿ, ೫೪೮ ಕೋಟಿ ವೆಚ್ಚದಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಭರ್ತಿ ಮಾಡುತ್ತೇವೆ, ಎರಡನೇ ಹಂತದಲ್ಲಿ ವೈ ಜಿ ಗುಡ್ಡ, ಕಣ್ವ ಜಲಾಶಯ ಮತ್ತು ಮಂಚನಬೆಲೆ ಡ್ಯಾಂ ಗೆ ನೀರು ಹರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.


ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಸಜ್ಜಾಗಿದ್ದ ಪೋಲಿಸ್ ಪೆರೇಡ್ ಮತ್ತು ಸಾಂಸ್ಕೃತಿಕ ತಂಡಗಳು ನಾಲ್ಕು ಗಂಟೆಗಳ ಕಾಲ ತಡವಾಗಿದ್ದಕ್ಕೆ ಸುಸ್ತಾದಂತೆ ಕಂಡುಬಂದರೂ ಸಹ ನಂತರ ಹುಮ್ಮಸ್ಸಿನಿಂದ ಸಾಗಿದವು.

ಸಾವಂದಿಪುರದಲ್ಲಿ ನಿರ್ಮಾಣಗೊಂಡಿದ್ದ ಹೆಚ್ ಡಿ ದೇವೇಗೌಡರ ಕಂಚಿನ ಪುತ್ಥಳಿ ಅನಾವರಣಕ್ಕೆ ಬರಲು ಕನಗನಮರಡಿ ಬಸ್ ದುರಂತ ತಡೆಯಾಗಿದ್ದರಿಂದ ಇಂದು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು, ಇದೇ ವೇಳೆ ಅಭಿಮಾನಿಗಳು ೧,೦೦೧ ತೆಂಗಿನಕಾಯಿಗಳನ್ನು ಹೀಡುಗಾಯಿ ಹೊಡೆಯುವುದರ ಮೂಲಕ ಅಭಿಮಾನ ಮೆರೆದರು.


ಜನಸಂಪರ್ಕ ಸಭೆಗಳಲ್ಲಿ ಮನವಿ ಸಲ್ಲಿಸಲು ನಾಮುಂದು ತಾಮುಂದು ಎಂದು ನೂಕುನುಗ್ಗಲು ಸಾಮಾನ್ಯವಾಗಿತ್ತು, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮುಲ್ಲೈಮುಹಿಲನ್ ಮುಖ್ಯಮಂತ್ರಿಗಳ ಎಡಬಲದಲ್ಲಿ ನಿಂತು ಸಾಧ್ಯವಾದಷ್ಟು ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಜವಾಬ್ದಾರಿ ಮೆರೆದರು, ಕುಮಾರಸ್ವಾಮಿ ಯವರು ಅರ್ಜಿದಾರರನ್ನು ಕುರಿತು ಮನವಿ ನನಗೇ ಕೊಡಬೇಕೆಂದೇನಿಲ್ಲ, ಅಧಿಕಾರಿಗಳಿಗೆ ನೀಡಿ, ತಮ್ಮ ಅರ್ಜಿ ಇತ್ಯರ್ಥ ಆಗಿಲ್ಲ ಎಂದಾದರೆ ಕೃಷ್ಣಾ ದಲ್ಲಿ ಬಂದು ವಿಚಾರಿಸಿದರೆ ಅಧಿಕಾರಿಗಳು ಪರಿಹರಸಿಕೊಡುತ್ತಾರೆ ಎಂದರು.


ಅರವತ್ತು ವರ್ಷ ದಾಟಿದ ಎಲ್ಲರಿಗೂ ೧,೦೦೦ ರೂಪಾಯಿಗಳನ್ನು ತಲುಪಿಸಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು, ಮುಂದಿನ ವರ್ಷದಿಂದ ವೃದ್ದರಿಗೆ ೨,೦೦೦ ರೂ ವೃದ್ಯಾಪ್ಯ ವೇತನ ಕೊಡಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.


೨,೦೦೦ ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು ಕಂದಾಯ ಇಲಾಖೆಗೆ ಸಂಬಂಧಿಸಿದ ಹೆಚ್ಚು ಅರ್ಜಿಗಳು ಬಂದಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಎಲ್ಲವನ್ನೂ ಕಾಲಮಿತಿಯೊಳಗೆ ಪರಿಹರಿಸುವಂತೆ ಸೂಚಿಸಿದರು, ಕಂದಾಯ ಇಲಾಖೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಬೇಕಾಗಿತ್ತು, ಸದ್ಯ ತಡೆ ಹಿಡಿದಿದ್ದೇನೆ, ಈಗಲೂ ಕೆಲಸ ಮಾಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇದೇ ವೇಳೆ ಖಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಗಳು ಸಾರ್ವಜನಿಕರ ಮತ್ತು ರೈತರ ಕೆಲಸವನ್ನು ಶೀಘ್ರವಾಗಿ ಮಾಡಿಕೊಡಿ ಇಲ್ಲವಾದರೆ ಅಮಾನತಿಗೆ ತಯಾರಾಗಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.


ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ೧,೦೪೮ ರೈತರ ೪.೧ ಕೋಟಿ ರೂಪಾಯಿಗಳು, ಕೋಡಂಬಳ್ಳಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ೧,೭೮೯ ರೈತರ ೮.೩೫ ಕೋಟಿ ರೂಪಾಯಿಗಳ ಸಹಕಾರ ಸಂಘಗಳ ಸಾಲಮನ್ನಾ ಮಾಡಿದ ಋಣಮುಕ್ತ ಪತ್ರಗಳನ್ನು ರೈತರಿಗೆ ವಿತರಿಸಿದರು.


ಕಾವೇರಿ ನಿಗಮದ ೧.೬೫ ಕೋಟಿ ರೂಪಾಯಿಗಳು, ಲೋಕೋಪಯೋಗಿ ಇಲಾಖೆಯ ೧೮.೩೫ ಕೋಟಿ ರೂಪಾಯಿಗಳು, ಹೊಂಗನೂರು ಜಿಲ್ಲಾ ಪಂಚಾಯತ ವ್ಯಾಪ್ತಿಯ ೧೫.೬೫ ಕೋಟಿ ರೂಪಾಯಿಗಳು ಮತ್ತು ಕೋಡಂಬಳ್ಳಿ ಲೋಕೋಪಯೋಗಿ ಇಲಾಖೆಯ ೬.೭ ಕೋಟಿ ರೂಪಾಯಿಗಳ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಇದೇ ವೇಳೆ ನೆರವೇರಿಸಿದರು.


ಅಕ್ಕೂರು, ಕೋಡಂಬಳ್ಳಿ ಮತ್ತು ಹೊಂಗನೂರು ಜಿಲ್ಲಾ ಪಂಚಾಯತ ವ್ಯಾಪ್ತಿಯ ಬಹುತೇಕ ಎಲ್ಲಾ ಹಳ್ಳಿಗಳಲ್ಲೂ ತಳಿರು ತೋರಣಗಳೊಂದಿಗೆ ಸಿಂಗರಿಸಿ ಪಟಾಕಿ ಸಿಡಿಸಿ ಮುಖ್ಯಮಂತ್ರಿ ಗಳನ್ನು ಸ್ವಾಗತಿಸಲಾಯಿತು, ಅಭಿಮಾನಿಗಳು ಮತ್ತು ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ಜನರು ನಿಂತೆಡೆಯಲ್ಲಿಯೂ ಸಹ ಕೈ ಮುಗಿದು ಅಹವಾಲುಗಳನ್ನು ಸ್ವೀಕರಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑