Tel: 7676775624 | Mail: info@yellowandred.in

Language: EN KAN

    Follow us :


ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

Posted date: 03 Feb, 2018

Powered by:     Yellow and Red

ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ರಾಮನಗರ : ಕೃಷಿ ವಿಜ್ಞಾನದಲ್ಲಿರುವ ಪದಗಳಿಗೆ ಕನ್ನಡದಲ್ಲಿ ಪರ್ಯಾಯ ಪರಿಭಾಷೆಗಳನ್ನು ರೂಪಿಸುವುದು ಕಷ್ಟ ಎಂಬ ವಾದದಲ್ಲಿ ಹುರುಳಿಲ್ಲ. ಆಂಗ್ಲಭಾಷೆಯೇ ಶ್ರೇಷ್ಠ ಎಂಬ ಭ್ರಮೆಯಲ್ಲಿರುವವರು ಹುಟ್ಟುಹಾಕಿರುವ ನೆಪ ಮಾತ್ರ ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಹೇಳಿದರು. 
    ಶ್ಯಾನುಭೋಗನಹಳ್ಳಿಯಲ್ಲಿ ಜರುಗಿದ ರಾಮನಗರ ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣಕಾರರಾಗಿ ಅವರು ಮಾತನಾಡಿದರು.
ಇವತ್ತಿನ ರೈತ-ವಿಜ್ಞಾನಿ ಸಂವಾದಗೋಷ್ಠಿಯಲ್ಲಿ ನಡೆದ ಚರ್ಚೆಯಲ್ಲಿ ಬಳಕೆಯಾದ ಎಷ್ಟೋ ಪದಗಳು ಅಚ್ಚರಿ ಹುಟ್ಟಿಸುವಷ್ಟು ವಿಶೇಷವಾಗಿವೆ. ಇದರಿಂದ ವಿಜ್ಞಾನ ವಿಷಯಗಳನ್ನೂ ಕನ್ನಡ ಮಾಧ್ಯಮದಲ್ಲಿ ಕಲಿಯಲು ಸಾಧ್ಯವಿದೆ ಎಂದು ತಿಳಿಯುತ್ತದೆ. ಕನ್ನಡ ಎಲ್ಲ ಸಾಧ್ಯತೆಗಳನ್ನೂ ಒಳಗೊಂಡಿರುವ ಭಾಷೆ. ಇದಕ್ಕೆ ಯಾವುದೇ ಮಿತಿಗಳಿಲ್ಲ. ಕನ್ನಡದ ಶಕ್ತಿಯನ್ನು ಅರ್ಥ ಮಾಡಿಕೊಂಡು ಅದನ್ನು ಬಳಸಿದಾಗ ಕನ್ನಡ ಭಾಷೆ ಇನ್ನಷ್ಟು ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಕೃಷಿಯಲ್ಲಿ ಬೀಜರಹಿತ ಉತ್ಪಾದನೆ ಇರುವಂತೆಯೇ ಸಾಹಿತ್ಯದಲ್ಲಿಯೂ ಬೀಜರಹಿತ ಸಾಹಿತ್ಯ ಸೃಷ್ಟಿಯಾಗುತ್ತಿದೆ. ನೆಲಮೂಲ ಸಂಸ್ಸøತಿಯ ಅರಿವಿಲ್ಲದೆ ರಚಿತವಾಗುವ ಸಾಹಿತ್ಯದಲ್ಲಿ ಸತ್ವ ಇರುವುದಿಲ್ಲ. ಇಂಥ ಬೀಜರಹಿತ ಸಾಹಿತ್ಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಎಚ್.ಎಂ.ಶ್ವೇತಾಮಣಿ, ರಾಣಿ ಕಿರಣ್, ಬಿ.ಜಯದೇವ್, ಪೂರ್ಣಚಂದ್ರ ಹಾಗೂ ಕೃಷ್ಣಮೂರ್ತಿ ಭಾಗವಹಿಸಿ ಚರ್ಚಿಸಿದರು.
ವೆಂಕಟಾಚಲಯ್ಯ, ಅಪ್ಪಾಜಿ ಚನ್ನಮಾನಹಳ್ಳಿ, ಶಫೀಕ್ ಅಹಮದ್, ರಮಣಿ, ಶಶಿ ಕುಮಾರ್, ಡಾ. ಎಸ್.ಎನ್. ಮಧುಸೂದನ್, ಜಿ.ಹೆಚ್. ರಾಮಯ್ಯ,  ಮಾಯಮ್ಮ, ಗಿರೀಶ್ ಕೊತ್ತೀಪುರ, ಸುರೇಂದ್ರ ಅವರಿಗೆ ರೇಷ್ಮೆ ನಾಡು ಪ್ರಶಸ್ತಿ ನೀಡಿ ಗೌರವಿಸಲಾಯಿತು. 
ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎನ್. ಅಶೋಕ್, ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್.ಪಿ. ಜಗದೀಶ್, ಸಮ್ಮೇಳನಾಧ್ಯಕ್ಷ ಎಲ್.ಸಿ. ರಾಜು, ಸಾಹಿತಿ ಎಂ. ಬೈರೇಗೌಡ, ರಂಗ ನಿರ್ದೇಶಕ ಬೈರ್ನಳ್ಳಿ ಶಿವರಾಂ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜ್, ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಟಿ. ದಿನೇಶ್, ಗೌರವ ಕಾರ್ಯದರ್ಶಿಗಳಾದ ಎಚ್.ಕೆ. ಶೈಲಾಶ್ರೀನಿವಾಸ್, ಜಿ.ಟಿ. ಕೃಷ್ಣ, ಹೋಬಳಿ ಘಟಕದ ಅಧ್ಯಕ್ಷ ಚಿನ್ನಗಿರಿಗೌಡ, ಪದಾಧಿಕಾರಿಗಳಾದ ರಾಜೇಶ್ ಕವಣಾಪುರ, ಕಿರಣ್ ಬಿಳಗುಂಬ, ಸಮದ್, ರಾಜೇಶ್, ಉಪನ್ಯಾಸಕರಾದ ಇಂದಿರಮ್ಮ, ಅಕ್ಕೂರುಬಸವರಾಜು ಮತ್ತಿತರರು ಉಪಸ್ಥಿತರಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑