Tel: 7676775624 | Mail: info@yellowandred.in

Language: EN KAN

    Follow us :


ಮಳೂರು ಜಿಲ್ಲಾ ಪಂಚಾಯತಿಯಲ್ಲೂ ಕೈ ಕೊಳಕು‌ ಮಾಡಿಕೊಂಡ ಇಂಜಿನಿಯರ್ ಶಂಕರ್

Posted date: 03 Jul, 2019

Powered by:     Yellow and Red

ಚನ್ನಪಟ್ಟಣ: ತನ್ನ ವೈಭವೋಪೇತ ಶೋಕಿಗಾಗಿ ಜಿಲ್ಲಾ ಪಂಚಾಯತಿ ತುಂಡು ಗುತ್ತಿಗೆಗಳ ಕಾಮಗಾರಿಗಳನ್ನೇ ನುಂಗಿ ನೀರು ಕುಡಿಯುತ್ತಿರುವ ಚನ್ನಪಟ್ಟಣದ ಅಂದಿನ ಪರೀಕ್ಷಾರ್ಥ (ಪ್ರೊಬೇಷನರಿ) ಕಿರಿಯ ಇಂಜಿನಿಯರ್ ಶಂಕರ್ ಮತ್ತು ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ತಾಲ್ಲೂಕಿನಾದ್ಯಂತ ಕಳಪೆ ಕಾಮಗಾರಿ ಹಾಗೂ ಕಾಮಗಾರಿ ಮಾಡದೆ ಕಳ್ಳ ಬಿಲ್ ಮಾಡಿಕೊಂಡು ಸಾರ್ವಜನಿಕ ರ ತೆರಿಗೆ ಹಣವನ್ನು ದೋಚುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ವಿ ಜಿ ಕೃಷ್ಣೇಗೌಡ ದೂರಿದ್ದಾರೆ.

ಈ ಇಬ್ಬರು ಅಧಿಕಾರಿಗಳು ೨೦೧೮/೧೯ ನೇ ಸಾಲಿನಲ್ಲಿ ಕಳಪೆ ಕಾಮಗಾರಿ ಹಾಗೂ ಕಳ್ಳ ಬಿಲ್ ಗಳನ್ನು ಮಾಡಿಕೊಂಡು ಹೊಂಗನೂರು ಜಿಲ್ಲಾ ಪಂಚಾಯತಿಯಲ್ಲಿ ಅತಿ ಹೆಚ್ಚು ಕಳ್ಳ ಬಿಲ್ ಮತ್ತು ಕೋಡಂಬಳ್ಳಿ ಜಿಲ್ಲಾ ಪಂಚಾಯತಿ, ನಂತರ ಮಳೂರು ಜಿಲ್ಲಾ ಪಂಚಾಯತಿ ಯಲ್ಲಿಯೂ ಸಹ ಕೆಲಸ ಮಾಡದೇ ಗುತ್ತಿಗೆದಾರ ಬಿಲ್ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ, ಈ ಎಲ್ಲಾ ದಾಖಲೆಗಳ ಸಮೇತ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿರುವುದಲ್ಲದೇ ಇನ್ನೂ ಅನೇಕ ಕಳಪೆ ಕಾಮಗಾರಿಗಳನ್ನು ಅನಾವರಣ ಮಾಡಲಾಗುವುದು ಎಂದು ಎಚ್ಚರಿಸುತ್ತಾರೆ.

ಮಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮಳೂರು ಗ್ರಾಮ ಪಂಚಾಯತಿ ಗೆ ಸೇರಿದ *ತೂಬಿನಕೆರೆ ಗ್ರಾಮದ ಹರಿಜನ ಕಾಲೋನಿಯಲ್ಲಿ*
*ಮೆಷಿನರಿ ಚರಂಡಿ* ಕಾಮಗಾರಿ ಮಾಡಿರುವುದಾಗಿ ಗುತ್ತಿಗೆದಾರ *ಎಸ್ ಪ್ರದೀಪ್ ಕುಮಾರ್* ಹೆಸರಿನಲ್ಲಿ ೨,೯೯,೭೯೦ ರೂ ಗಳ ಬಿಲ್ ನ್ನು ೨೦೧೮ ರ ಮಾಚ್೯ ತಿಂಗಳ ೨೬ ನೇ ತಾರೀಖಿನಂದು ಕಿರಿಯ ಇಂಜಿನಿಯರ್ ಶಂಕರ್ ಮತ್ತು ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ ಬಿಡುಗಡೆ ಮಾಡಿರುವುದು ದಾಖಲಾಗಿದೆ.

ವಾಸ್ತವವಾಗಿ ಈ ಕಾಮಗಾರಿಯ ಕ್ರಿಯಾಯೋಜನೆಯನ್ನು ತಯಾರಿಸುವಾಗ ತೂಬಿನಕೆರೆ ಹರಿಜನ ಕಾಲೋನಿಯ ಕರಿಯಯ್ಯನ ಮನೆಯ ಹತ್ತಿರ ಚರಂಡಿ ನಿರ್ಮಾಣ ಕಾಮಗಾರಿಯೆಂದು ತೆಗೆದುಕೊಂಡಿರುತ್ತಾರೆ, ಆದರೆ ಅಂದಾಜು ಪಟ್ಟಿ, ಕಾರ್ಯಾದೇಶ, ಬಿಲ್ ಕಾಪಿ ಹಾಗೂ ಇನ್ನಿತರ ದಾಖಲೆಗಳಲ್ಲಿ ತೂಬಿನಕೆರೆ ಗ್ರಾಮದ ಹರಿಜನ ಕಾಲೋನಿಯ ವ್ಯಾಪ್ತಿಯಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಎಂದು ನಮೂದಿಸಿದ್ದಾರೆ. ಕಾಮಗಾರಿಯನ್ನು ಖುದ್ದಾಗಿ ಪರೀಕ್ಷಿಸಿದಾಗ ಈ ಕಾಮಗಾರಿ ನಡೆದಿರುವುದಿಲ್ಲ.

ಬಿಲ್ ಪಡೆದು ಕೊಳ್ಳಲು ಲಗತ್ತಿಸಿರುವ ಪೋಟೋ ಹರಿಜನ ಕಾಲೋನಿಯ ಕರಿಯಯ್ಯನ ಮನೆಯ ಮುಂದೆ ಸುಮಾರು ವರ್ಷಗಳ ಹಿಂದೆಯೇ ಬೇರೆ ಅನುದಾನದಲ್ಲಿ ಮಾಡಿರುವ ಕಾಮಗಾರಿ ಎಂಬುದು ಎಂತಹವರಿಗೂ ತಿಳಿಯುತ್ತದೆ.

ಪೋಟೋ ದಲ್ಲಿ ತೋರಿಸಿರುವ ಕಾಮಗಾರಿಯ ಅಳತೆ ೭೫ ಮೀಟರ್ ಉದ್ದ ತೋರಿಸಿದ್ದು,  ನಂ ೦೩ ರಲ್ಲಿ ೦.೬೦ ಮೀಟರ್ ನಮೂದಿಸಿದ್ದು, ಪೋಟೋ ಲಗತ್ತಿಸಿರುವ ದಾಖಲೆಯಲ್ಲಿ ೦.೪೦ ಮೀಟರ್ ತೋರಿಸಿರುವುದು ಕಾಮಗಾರಿ ಮಾಡಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿವೆ.

*ಹೊಂಗನೂರು ಜಿಲ್ಲಾ ಪಂಚಾಯತಿ* ವ್ಯಾಪ್ತಿಯ ಕಳ್ಳ ಬಿಲ್ ಗಳಿಗೆ ಸಂಬಂಧಿಸಿದಂತೆ ಕಿರಿಯ ಇಂಜಿನಿಯರ್ ಈಗಾಗಲೇ ಅಮಾನತು ಆಗಿದ್ದು, ಬಿಲ್ ಮಾಡಲು ಸಹಕರಿಸಿದ ಹಿರಿಯ ಅಧಿಕಾರಿಗಳಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ತನಿಖೆ ಮಾಡಿ ಕಾನೂನು ಕ್ರಮ ಕೈಗೊಂಡು ಗುತ್ತಿಗೆ ಹಣ ವಸೂಲಿ ಮಾಡಬೇಕೆಂದು ಅವರು ಈ ಮೂಲಕ ಆಗ್ರಹಿಸಿದ್ದಾರೆ.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑