ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಈ ರೀತಿಯ ದೊಡ್ಡ ಮಟ್ಟದ ಕ್ರೀಡೆಗಳು ನಡೆಯಬೇಕು ಎಂದು ಸಿವಿಲ್ ನ್ಯಾಯಾಧೀಶ ಎಸ್ ನಟರಾಜ್ ರವರು ಅಭಿಪ್ರಾಯ ಪಟ್ಟರು.
ಅವರು ಇಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ವಿದ್ಯಾಭ್ಯಾಸದ ಕಾಲದಲ್ಲಿ ಆಟವಾಡುತ್ತಿದ್ದ ನಮ್ಮನ್ನು ಪೋಷಕರು ಹುಡುಕಿ ಮನೆಗೆ ಕರೆ ತರುತ್ತಿದ್ದರು. ಆದರೆ ಇಂದಿನ ಮಕ್ಕಳನ್ನು ಆಟವಾಡಲು ಮನೆಯಿಂದ ಹೊರಗೆ ಕಳುಹಿಸಲು ಸಾಧ್ಯವಾಗುತ್ತಿಲ್ಲ, ಅದಕ್ಕೆ ಹಲವಾರು ವೈಯುಕ್ತಿಕ ಮತ್ತು ಸಾಮಾಜಿಕ ಕಾರಣಗಳಿದ್ದರೂ ಸಹ ಮಕ್ಕಳ ಮೊಬೈಲ್ ವ್ಯಾಮೋಹವು ಅದಕ್ಕೆ ಅಡ್ಡಿಯಾಗಿದೆ ಎಂದು ವಿಷಾದಿಸಿದರು. ಯೋಗ ದಿಂದ ಮನಸ್ಥಿತಿ ವಿಕಸನಗೊಂಡರೆ ವ್ಯಾಯಾಮದಿಂದ ದೇಹ ಉರುಪುಗೊಳ್ಳುತ್ತದೆ, ಯೋಗ ನಮ್ಮ ದೇಶದ ಕೊಡುಗೆಯಾದರೂ ನಾವು ಇನ್ನೂ ಸಂಪೂರ್ಣವಾಗಿ ಅಳವಡಿಸಿಕೊಂಡಿಲ್ಲ, ಆದರೆ ವಿದೇಶಿಯರು ಯೋಗಾಭ್ಯಾಸ ಮಾಡದೆ ಯಾವುದೇ ಕೆಲಸ ಮಾಡುವುದಿಲ್ಲ, ನಾವು ಕುಟುಂಬ ಸಮೇತವಾಗಿ ಪ್ರತಿನಿತ್ಯ ಯೋಗ ಮತ್ತು ವ್ಯಾಯಾಮಕ್ಕೆ ಸಮಯ ಮೀಸಲಿಡಬೇಕು ಎಂದು ಕಿವಿ ಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಮಾತನಾಡಿ ಕ್ರೀಡೆ ಎಂಬುದು ಕೇವಲ ಗೆಲುವು ಸೋಲಿನ ಆಟವಾಗಬಾರದು, ಅದು ನಮ್ಮ ದೈಹಿಕ ಕಸರತ್ತಾಗಬೇಕು, ಆಗಲೇ ನಮ್ಮ ಆರೋಗ್ಯ ಮತ್ತು ಆಯಸ್ಸು ಹೆಚ್ಚಾಗಲು ಸಾಧ್ಯ. ಕೆಲ ಉದ್ಯೋಗ ಹೊರತು ಪಡಿಸಿದರೆ ಹಲವಾರು ದೊಡ್ಡ ಮಟ್ಟದ ನೌಕರರು ಕುಳಿತೇ ಕೆಲಸ ಮಾಡಬೇಕಾಗಿದೆ, ಅವರಿಗೆ ಹಲವಾರು ರೀತಿಯ ತೊಂದರೆಗಳು ದೇಹ ಮತ್ತು ಮನಸ್ಸನ್ನು ಕಾಡುತ್ತಿರುತ್ತವೆ. ಅಂತಹ ಉದ್ಯೋಗಿಗಳಿಗೆ ಇಂದಿನ ಕ್ರೀಡಾಕೂಟ ಉಪಯುಕ್ತವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ತಹಶಿಲ್ದಾರ್ ಸುದರ್ಶನ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಚಂದ್ರು, ನಗರಸಭೆಯ ಪೌರಾಯುಕ್ತ ಶಿವನಂಕಾರಿಗೌಡ ರವರು ಕ್ರೀಡಾ ಪಟುಗಳಿಗೆ ಶುಭಕೋರಿದರು.
ವೇದಿಕೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ ಕೆ ಪಿ ರಾಜು, ಅಕ್ಷರ ದಾಸೋಹ ಅಧಿಕಾರಿ ಸಿದ್ದರಾಜು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಮದಾಸ್, ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಮತ್ತು ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಎ ಜಿ ಸ್ವಾಮಿ ಹಾಜರಿದ್ದರು.
ಗೋ ರಾ ಶ್ರೀನಿವಾಸ..
ಮೊ:9845856139.
Recent news in sports »

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು.

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರ

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
ಟಾಸ್ ಸೋತು

ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಫೈನಲ್

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ.
ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಇಂಗ್ಲೆಂಡ್ ನೀಡಿದ್ದ 269 ರನ್ ಗ
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ
ನವದೆಹಲಿ: ಐಪಿಎಲ್ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ.
ಇಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನ
ಆರ್ ಸಿ ಬಿ ತಂಡಕ್ಕೆ ಜಯ
ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
??????????????