Tel: 7676775624 | Mail: info@yellowandred.in

Language: EN KAN

    Follow us :


ಸಾಹಿತ್ಯ ಪ್ರೇಮಿ ತೋಟದಮನೆ ಕೃಷ್ಣೇಗೌಡ ಅಸ್ತಂಗತ

Posted date: 06 Aug, 2019

Powered by:     Yellow and Red

ಸಾಹಿತ್ಯ ಪ್ರೇಮಿ ತೋಟದಮನೆ ಕೃಷ್ಣೇಗೌಡ ಅಸ್ತಂಗತ

ಚನ್ನಪಟ್ಟಣ: ರಾಮನಗರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಉಪಾಧ್ಯಕ್ಷ, ಕವಿ, ನಿವೃತ್ತ ಸಬ್ ರಿಜಿಸ್ಟ್ರಾರ್ *ತೋಟದಮನೆ ಕೃಷ್ಣೇಗೌಡ* ಎಂದೇ ಚಿರಪರಿಚಿತರಾಗಿದ್ದ ಕೃಷ್ಣೇಗೌಡರು (೭೮) ನಿನ್ನೆ ನಿಧನ ಹೊಂದಿದರು.


ರಾಮನಗರ ಸೇರಿದಂತೆ ಅನೇಕ ತಾಲ್ಲೂಕುಗಳಲ್ಲಿ ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದ ಅವರು ವ್ಯವಸಾಯದ ಜೊತೆಗೆ ಕವನಗಳನ್ನು ಬರೆಯುವುದು, ನಾಡು-ನುಡಿಗಳ ಬಗ್ಗೆ ಅಭಿಮಾನದಿಂದ ಮಾತನಾಡುವುದು, ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಗುರುತಿಸಿಕೊಂಡಿದ್ದರು.


ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಹಮ್ಮಿಕೊಂಡಿದ್ದ ಪಾದಯಾತ್ರೆ ಸಂದರ್ಭದಲ್ಲಿ ಕೃಷ್ಣೇಗೌಡರ ಮನೆಯಲ್ಲಿ ವಾಸ್ತವ್ಯ ಹೂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಈಗಾಗಲೇ *ಸಂಕ್ರಾಂತಿ* ಎಂಬ ಕವನ ಸಂಕಲನವನ್ನು ಪ್ರಕಟಿಸಿ ಬಿಡುಗಡೆ ಮಾಡಿದ್ದ ಅವರು ದೇ ಜವರೇಗೌಡರ ಮುನ್ನುಡಿ ಇರುವ *ಮುಂಗೋಳಿ* ಎಂಬ ಕವನ ಸಂಕಲನವನ್ನು ಬರೆದು ಬಿಡುಗಡೆಗೊಳಿಸಲು ಸಿದ್ದತೆ ನಡೆಸಿದ್ದರು.


ಬೆಂಗಳೂರು ಮೈಸೂರು ಹೆದ್ದಾರಿಯ ಮತ್ತಿಕೆರೆ ಬಳಿ ಇರುವ ಅವರ ತೋಟದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದೆ ವೇಳೆ ಜಿಲ್ಲೆಯ ಸಾಹಿತ್ಯ ಪ್ರೇಮಿಗಳು, ನಾಡು-ನುಡಿಯ ಹೋರಾಟಗಾರರು ಸೇರಿದಂತೆ ಅನೇಕ ಗಣ್ಯರು ಮೃತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ವಿದಾಯ ಹೇಳಲಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑