Tel: 7676775624 | Mail: info@yellowandred.in

Language: EN KAN

    Follow us :


ವಿಜೃಂಭಣೆಯಿಂದ ಜರುಗಿದ ಕೆಂಗಲ್ ರಥೋತ್ಸವ

Posted date: 20 Jan, 2020

Powered by:     Yellow and Red

ವಿಜೃಂಭಣೆಯಿಂದ ಜರುಗಿದ ಕೆಂಗಲ್ ರಥೋತ್ಸವ

ಚನ್ನಪಟ್ಟಣ: ತಾಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ (ಅಯ್ಯನಗುಡಿ) ಜಾತ್ರಾ ಮಹೋತ್ಸವ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ನೆರವೇರಿತು.


ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದ ರಥಾಂಗಹೋಮ, ಯಾತ್ರಾದಾನ, ಮಂಟಪೋತ್ಸವ, ಗೋವು ಹಾಗೂ ಅಶ್ವಪೂಜೆ, ಪೂಜಾ ಕುಣಿತ, ತಮಟೆ ಡೊಳ್ಳು ಕುಣಿತ, ತೋಮಾಲ ಸೇವೆ, ಯಾತ್ರದಾನ ಸೇವೆ ಮುಂತಾದ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನದ ವೇಳೆಗೆ ತಹಶೀಲ್ದಾರ್ ಸುದರ್ಶನ್ ಅವರು ಪೂಜೆ ಸಲ್ಲಿಸುವುದರ ಮೂಲಕ ಸರಕಾರಿ ಸೇವೆ ಬ್ರಹ್ಮ ರಥೋತ್ಸವಕ್ಕೆ ಚಾಲನೆ ನೀಡಿದರು. ತಾಲೂಕಿನ ಹಲವು ಇಲಾಖೆಗಳ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಭಕ್ತಾದಿಗಳು ರಥವನ್ನು ದೇವಸ್ಥಾನದ ಆವರಣ ಹಾಗೂ ದೇವಾಲಯದ ಉದ್ದಗಲಕ್ಕೂ ಭಕ್ತಿ ಭಾವದಿಂದ ಎಳೆದು ಸಂಭ್ರಮಿಸಿದರು.


ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ಇಷ್ಟಾರ್ಥ ಸಿದ್ದಿಗಾಗಿ ಹಣ್ಣು-ಕಾಯಿ ಜವನ ಸಮರ್ಪಿಸಿ ಭಕ್ತಿ ಮೆರೆದರು. ಸಂಜೆ ವೇಳೆ ಮುತ್ತಿನ ಪಲ್ಲಕ್ಕಿ ಉತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ವಸಂತೋತ್ಸವ, ಅಶ್ವವಾಹನೋತ್ಸವ, ಪುಷ್ಪ ಮುಡಿ ಉತ್ಸವ, ಧ್ವಜಾರೋಹಣ, ಪೂರ್ಣಾಹುತಿ ಪುಷ್ಪರಾಗ ಕಾರ್ಯಕ್ರಮಗಳು ನೆರವೇರಿದವು.


ಆಂಜನೇಯಸ್ವಾಮಿಗೆ ಜಾತ್ರೆ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು. ಬ್ರಹ್ಮ ರಥೋತ್ಸವದಲ್ಲಿ ಜಿಲ್ಲೆಯ ಹಾಗೂ ತಾಲ್ಲೂಕಿನ ಹಲವು ಗಣ್ಯರು ಜನಪ್ರತಿನಿಧಿಗಳು ಅಧಿಕಾರಿಗಳು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಮುಖಂಡರು ಭಾಗವಹಿಸಿದ್ದರು. ಇದರ ಜೊತೆಗೆ ಇತಿಹಾಸ ಪ್ರಸಿದ್ಧ ಕೆಂಗಲ್ ದನಗಳ ಜಾತ್ರೆ ಸಹ ಭಾನುವಾರ ಅಂತ್ಯ ಕಂಡಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑