Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲು ಬ್ಯಾನರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಅರ್ಚನಾ

Posted date: 13 Mar, 2020

Powered by:     Yellow and Red

ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲು ಬ್ಯಾನರ್ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಅರ್ಚನಾ

ರಾಮನಗರ ಮಾ: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಮನಗರ ನಗರಸಭೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲು ಬ್ಯಾನರ್ ಬಿಡುಗಡೆ ಮಾಡಿದರು.


ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ (ಕೋವಿಡ್-೧೯) ಯಾವುದೇ ಪ್ರಕರಣಗಳು ಕಂಡು ಬಂದಿರುವುದಿಲ್ಲ. ಕೆಮ್ಮು, ಜ್ವರ ಮತ್ತು ಉಸಿರಾಟದ ತೊಂದರೆ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಈಗಾಗಲೇ ರಾಮನಗರ ನಗರಸಭೆ ವತಿಯಿಂದ ಕ್ರಿಮಿನಾಶಕ ಸಿಂಪಡಣೆ, ಧೂಮೀಕರಣ ಮಾಡಲಾಗುತ್ತಿದೆ. ಕೊರೋನಾ ವೈರಸ್ ಕುರಿತು ಸಾರ್ವಜನಿಕರು ಭಯ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.


ರಾಮನಗರ ಜಿಲ್ಲೆಯ ಎಲ್ಲಾ ಹೋಟೆಲ್, ಬೀದಿಬದಿ ವ್ಯಾಪಾರಿಗಳಿಗೆ ಕೊರೋನಾ ವೈರಸ್ ಕುರಿತು ತಿಳುವಳಿಕೆ ಪತ್ರ ನೀಡಲಾಗಿದೆ. ಸಾರ್ವಜನಿಕರು ಶುಚಿತ್ವ ಕಾಪಾಡಿಕೊಳ್ಳುವಂತೆ ತಿಳಿಸಿ ಅವರು ಮಾಂಸದ ಪದಾರ್ಥಗಳನ್ನು ಚೆನ್ನಾಗಿ ಬೇಯಿಸಿ ತಿನ್ನಬೇಕು. ಸರಿಯಾದ ಕ್ರಮದಲ್ಲಿ ಕೈ ತೊಳೆಯುವ ವಿಧಾನ ಅನುಸರಿಸಬೇಕು ಅಥವಾ ಅಲ್ಕೋಹಾಲ್ ಸ್ಯಾನಿಟೈಸರ್‌ನಿಂದ ಪದೇಪದೇ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು ಎಂದು ಸೂಚಿಸಿದರು.


ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಥವಾ ಉಚಿತ ೨೪×೭ ಆರೋಗ್ಯ ಸಹಾಯವಾಣಿ ೧೦೪ ಅಥವಾ ದೂ.ಸಂಖ್ಯೆ: ೦೮೦-೨೭೨೭೧೧೯೫, ೭೦೨೬೭೫೫೬೮೫ ಹಾಗೂ ೯೪೪೯೮೪೩೨೬೬ಗೆ ಕರೆ ಮಾಡಿ ಎಂದರು.  

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ರಾಮನಗರ ನಗರಸಭೆ ಪೌರಾಯುಕ್ತರಾದ ಶುಭ ಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑