Tel: 7676775624 | Mail: info@yellowandred.in

Language: EN KAN

    Follow us :


ನಾಳೆ ನಡೆಯಬೇಕಾಗಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆ

Posted date: 22 Mar, 2020

Powered by:     Yellow and Red

ನಾಳೆ ನಡೆಯಬೇಕಾಗಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು/ರಾಮನಗರ:ಮಾ/೨೨/೨೦/ಭಾನುವಾರ. ನಾಳೆ ಅಂದರೆ ೨೩ ರ ಸೋಮವಾರ ದಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಭಾಷೆಯ ಪರೀಕ್ಷೆಯನ್ನು ಕರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.


ಕೊರೊನಾ ವೈರಸ್ ಸೋಂಕು ಕಡಿಮೆಯಾದ ನಂತರ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಇಲಾಖೆಯು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


ರಾಮನಗರ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಹ ಇದನ್ನು ಅನುಮೋದಿಸಿದ್ದು ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑