Tel: 7676775624 | Mail: info@yellowandred.in

Language: EN KAN

    Follow us :


ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

Posted date: 23 Mar, 2020

Powered by:     Yellow and Red

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ಬೆಂಗಳೂರು/ರಾಮನಗರ:ಮಾ/೨೨/೨೦/ಭಾನುವಾರ. ಇದೇ ತಿಂಗಳ ೨೭ ನೇ ತಾರೀಖಿನಂದು ಆರಂಭವಾಗಬೇಕಿದ್ದ ಎಸ್ ಎಸ್ ಎಲ್ ಸಿ (ಹತ್ತನೇ ತರಗತಿ) ಯ ಪರೀಕ್ಷೆಯನ್ನು ಕೊರೊನಾ ವೈರಾಣು ಭೀತಿಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಮುಂದೂಡಿರುವುದಾಗಿ ರಾಜ್ಯ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.


ಈ ಹಿಂದೆ ಏನೇ ಕಷ್ಟವಾದರೂ ಇದೇ ತಿಂಗಳು ಪರೀಕ್ಷೆ ನಡೆಸಿಯೇ ತೀರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರು ಪ್ರಕಟಿಸಿದ್ದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡ ನಂತರ ಆಯುಕ್ತರು ಈ ಆದೇಶವನ್ನು ಹೊರಡಿಸಿದ್ದಾರೆ.


೭, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಬೇಕಾಗಿದ್ದ ಪರೀಕ್ಷೆಗಳನ್ನು ಈ ತಿಂಗಳ ಕೊನೆಯವರೆಗೆ ಮುಂದೂಡಲಾಗಿದ್ದು ಕೊರೊನಾ ಪರಿಸ್ಥಿತಿ ಬಿಗಡಾಯಿಸುತ್ತಿರುವುದರಿಂದ

ಈ ತಿಂಗಳ ಕೊನೆಯಲ್ಲೇ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑