Tel: 7676775624 | Mail: info@yellowandred.in

Language: EN KAN

    Follow us :


ರೈತರ ಜಮೀನಿಗೆ ತೆರಳಿ ಕೃಷಿ ಉತ್ಪನ್ನ ಖರೀದಿಸಿ ಕುಮಾರಸ್ವಾಮಿ

Posted date: 01 Apr, 2020

Powered by:     Yellow and Red

ರೈತರ ಜಮೀನಿಗೆ ತೆರಳಿ ಕೃಷಿ ಉತ್ಪನ್ನ ಖರೀದಿಸಿ ಕುಮಾರಸ್ವಾಮಿ

ರಾಮನಗರ:ಏ/೦೧/೨೦. ಅಧಿಕಾರಿಗಳು ನೇರವಾಗಿ ರೈತರ ಜಮೀನಿಗೆ ಹೋಗಿ‌ ಅವರು ಬೆಳೆದಿರುವ ಬೆಳೆಯನ್ನು ಖರೀದಿಸಿ ಎಂದು ಚನ್ನಪಟ್ಟಣ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೂಚಿಸಿದರು. ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಗಳ ಕಛೇರಿ ಸಭಾಂಗಣದಲ್ಲಿ ಕೊರೊನಾ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಜನ ಪ್ರತಿನಿಧಿ ಹಾಗೂ ಅಧಿಕಾರಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.


ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿ, ರೈತರ ಜಮೀನುಗಳಿಗೆ ತೆರಳಿ ಕೃಷಿ ಉತ್ಪನ್ನ ಖರೀದಿ ಸುವಂತೆ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಸಲಹೆ ನೀಡಿದ್ದೇನೆ. ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು ಎಂದರು.

ಚಿಂಚೋಳಿಯಲ್ಲಿ ಕಲ್ಲಂಗಡಿ ಹಣ್ಣು ಬೆಳೆದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಉತ್ಪನ್ನ ಕೊಳ್ಳುವವರಿಲ್ಲದೆ ಹೊಲದಲ್ಲೇ ಹಾಳಾಗುತ್ತಿದೆ. ಜಿಲ್ಲೆಯಲ್ಲಿನ ಮಾವು ಹಾಗೂ ರೇಷ್ಮೆ ಬೆಳೆಗಾರರಿಗೆ ಸಾಕಷ್ಟು ತೊಂದರೆ ಆಗಿದೆ. ತೋಟಗಾರಿಕೆಯ ಬೆಳೆಗಾರರಿಗೆ ಅನುಕೂಲ ಕಲ್ಪಿಸಿಕೊಡಲು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.


ಎಪಿಎಂಸಿಯಿಂದಲೂ ರೈತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದ ಅವರು, ಕೂಲಿ ಕಾರ್ಮಿಕರು ಸಂಕಷ್ಟ ದಲ್ಲಿ ಸಿಲುಕಿದ್ದಾರೆ. ಅವರಿಗೆ ಬೇಕಾದ ನೆರವು ಒದಗಿಸುವ ಕುರಿತು ಚರ್ಚೆ ನಡೆಸ ಲಾಗಿದೆ. ಕೆಲವರಿಗೆ ರೇಷನ್ ಕಾರ್ಡ್ ಸಹ ಇಲ್ಲ. ಇಂತಹವರಿಗೆ ಕೆಲವು ಸಂಘಟನೆಗಳು ನೆರವು ನೀಡಲು ಮುಂದೆ ಬಂದಿವೆ. ನಾವೂ ಕೈಲಾದ ಸಹಾಯ ಮಾಡುತ್ತಿದ್ದೇವೆ ಎಂದು ವಿವರಿಸಿದರು.


*೨೩೪ ಜನ ಮನೆಯಲ್ಲಿಯೇ ನಿಗಾದಲ್ಲಿ*

ಜಿಲ್ಲೆಯಲ್ಲಿ ೨೩೪ ಜನರನ್ನು ಮನೆನಿಗಾದಲ್ಲಿ ಇರಿಸಲಾಗಿದೆ. ನಾಲ್ಕು ದಿನ ಗಳ ಹಿಂದೆ ಜಿಲ್ಲೆಗೆ ಆರೋಗ್ಯ ಸಚಿವ ಶ್ರೀರಾಮುಲು ಸಭೆ ಮಾಡಿದ್ದರು. ಆಗಾಗ್ಗೆ ಇಲ್ಲಿನ ಪರಿಸ್ಥಿತಿ ಯನ್ನು ಅವಲೋಕಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂಬ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಓದಿದ್ದೇನೆ. ಆಸ್ಪತ್ರೆಯಲ್ಲಿ ಮೂರು ಪಾಳಿಯಲ್ಲಿ ಎಂಟು ಮಂದಿ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು ಒಟ್ಟು ೨೪ ಮಂದಿ ಇದ್ದಾರೆ. ಇನ್ನು ನಾಲ್ಕು ಮಂದಿ ವೈದ್ಯರ ಕೊರತೆ ಇದೆ, ಇಂತಹದ್ದೇ ಪರಿಸ್ಥಿತಿ ರಾಜ್ಯದಲ್ಲೂ ಇದೆ. ಆದರೂ ಇಲ್ಲಿ ಯಾವುದೇ ಸಮಸ್ಯೆ ಬಾಧಿಸುತ್ತಿಲ್ಲ, ಕೆಲವು ಸಾರಿ ತಪ್ಪು ಮಾಹಿತಿಯಿಂದ ಕೆಲವು ಸಮಸ್ಯೆಗಳು ಉಂಟಾಗುತ್ತವೆ. ಆ ಸಂಬಂಧ ಅಧಿಕಾರಿಗಳು ಸೂಕ್ತ ಕಾಲದಲ್ಲಿ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.


ರಾಮನಗರ ಜಿಲ್ಲೆಯಲ್ಲಿ ಕೊರೊನಾ ಸಮಸ್ಯೆ ಇಲ್ಲ, ಯಾವುದೇ ರೀತಿಯಲ್ಲಿ ಜನರು ಗಾಬರಿಗೊಳಗಾಗದೆ, ಧೈರ್ಯದಿಂದ ಮನೆಯಲ್ಲಿರಿ, ಕೆಲವೇ ದಿನ ಗಳಲ್ಲಿ ಇದರ ಸಂಕಷ್ಟ ಮುಗಿಯುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಅನಿತಾ ಕುಮಾರಸ್ವಾಮಿ, ಎ.ಮಂಜುನಾಥ್, ಜಿಲ್ಲಾಧಿಕಾರಿ ಅರ್ಚನಾ, ಉಪ ವಿಭಾಗಾಧಿಕಾರಿ ದಾಕ್ಷಾಯಿಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹ ಮಣಾಧಿಕಾರಿ ಇಕ್ರಂ ಉಲ್ಲಾ ಷರೀಫ್, ಜಿಲ್ಲಾ ಆರೋಗ್ಯಾಧಿಕಾರಿ ಡಾ ನಿರಂಜನ್‌ಇದ್ದರು.                                                  ಗೋ ರಾ ಶ್ರೀನಿವಾಸ...                ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑