Tel: 7676775624 | Mail: info@yellowandred.in

Language: EN KAN

    Follow us :


ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್

Posted date: 03 Apr, 2020

Powered by:     Yellow and Red

ಹತ್ತನೇ ತರಗತಿ ಹೊರತುಪಡಿಸಿ ಒಂಭತ್ತನೆಯ ತರಗತಿಯ ತನಕ ಎಲ್ಲರೂ ಪಾಸು ಸುರೇಶ್ ಕುಮಾರ್

ಬೆಂಗಳೂರು/ರಾಮನಗರ/೦೨/೨೦/ಗುರುವಾರ. ೨೦೧೯/೨೦ ನೇ ಶೈಕ್ಷಣಿಕ ಸಾಲಿನ ೭, ೮ ಮತ್ತು ೯ ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಶಿಕ್ಷಣ ಉಪ ನಿರ್ದೇಶಕರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಆಯಾಯ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಚಿವ ಸುರೇಶ್ ಕುಮಾರ್ ಆದೇಶಿಸಿದ್ದಾರೆ.


ನೊವೆಲ್ ಕೊರೊನಾ (ಕೋವಿಡ್-೧೯) ನ ವೈರಸ್ ಸೋಂಕು ತಡೆಗಟ್ಟುವಿಕೆಗೆ ಮುಂಜಾಗ್ರತಾ ಕ್ರಮವಾಗಿ *ಒಂದರಿಂದ ಆರನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಪಡಿಸಿದ್ದು ೨೦೧೯/೨೦ ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳು FA-1, FA-2, FA-3, FA-4 ಮತ್ತು 5A-1 ರಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಶ್ರೇಣಿಕೃತ ಫಲಿತಾಂಶವನ್ನು ಪ್ರಕಟಿಸಿ ಮುಂದಿನ ತರಗತಿಗೆ ತೇರ್ಗಡೆಗೊಳಿಸುವಂತೆ* ಈಗಾಗಲೇ ಉಲ್ಲೇಖ (೧) ಸುತ್ತೋಲೆಯನ್ನು ದಿನಾಂಕ ೧೩/೦೩/೨೦ ರಲ್ಲೇ ಸೂಚಿಸಲಾಗುತ್ತು.


ಉಲ್ಲೇಖ (೧) ರ ಸುತ್ತೋಲೆ ದಿನಾಂಕ *೨೬/೦೩/೨೦ ರಲ್ಲಿ ೭ ರಿಂದ ೯ ವಿದ್ಯಾರ್ಥಿಗಳಿಗೆ ದಿನಾಂಕ ೨೦/೦೪/೨೦ ರವರೆಗೆ ಪರೀಕ್ಷಾ ಪೂರ್ವಸಿದ್ಧತಾ ರಜೆಯನ್ನು* ಘೋಷಿಸಿದ್ದು ಪರೀಕ್ಷಾ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಪ್ರಕಟಿಸುವುದಾಗಿ ಈ ಹಿಂದೆ ತಿಳಿಸಲಾಗಿತ್ತು.


ದಿನಾಂಕ ೦೨/೦೪/೨೦ ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ತೀರ್ಮಾನದಲ್ಲಿ ಕೈಗೊಂಡ ತೀರ್ಮಾನದಂತೆ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವುದು ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ *೭ ಮತ್ತು ೮ ನೇ ತರಗತಿಯ ವಿದ್ಯಾರ್ಥಿಗಳಿಗೂ ಸಹ ೨೦೧೯/೨೦ ನೇ ಸಾಲಿಗೆ ಪರೀಕ್ಷೆಗಳನ್ನು ರದ್ದುಪಡಿಸಿದ್ದು, ಸದರಿ ವಿದ್ಯಾರ್ಥಿಗಳಿಗೆ ಯಾವುದೇ ಷರತ್ತುಗಳನ್ನು ವಿಧಿಸದೇ ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವುದು* ಹಾಗೂ ಸದರಿ ವಿದ್ಯಾರ್ಥಿಗಳಿಗೆ ೨೦೧೯/೨೦ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ನಡೆಸಿರುವ ರೂಪಾತ್ಮಕ (ಫಾರಮೇಟಿವ್) ಹಾಗೂ ಸಂಕಾತ್ಮಕ (ಸಮ್ಮೆಟಿವ್) ಮೌಲ್ಯ ಮಾಪನದ ಆಧಾರದ ಮೇಲೆ ಶ್ರೇಣೀಕೃತ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದರು.


೯ ನೇ ತರಗತಿ ವಿದ್ಯಾರ್ಥಿಗಳನ್ನು ಶಾಲೆಯು ಈಗಾಗಲೇ ನಡೆಸಿರುವ ರೂಪಾತ್ಮಕ (ಫಾರಮೆಟಿವ್) ಹಾಗೂ ಸಂಕಲಾತ್ಮಕ (ಸಮ್ಮೆಟಿವ್) ಮೌಲ್ಯ ಮಾಪನದ ಆಧಾರದ ಮೇಲೆ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಲು ಆದೇಶಿಸಲಾಗಿದೆ. ಆದರೆ ಯಾವುದೇ ವಿದ್ಯಾರ್ಥಿಯು ಈ ಆಂತರಿಕ ಮೌಲ್ಯಮಾಪನದಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ, ಶಾಲೆಗಳು ಈ ರಜಾ ಅವಧಿಯನ್ನು ಅಂತಹ ವಿದ್ಯಾರ್ಥಿಯ ಕಲಿಕೆಯ ಮಟ್ಟವನ್ನು ಉತ್ತಮಗೊಳಿಸುವ ಪ್ರಯತ್ನಕ್ಕೆ ಬಳಸಿಕೊಳ್ಳುವುದು ಹಾಗೂ *ಮುಂದಿನ ಶೈಕ್ಷಣಿಕ ಸಾಲಿನ ಆರಂಭದ ಮುನ್ನಾ ಸದರಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಮೌಲ್ಯಾಂಕನ ಪರೀಕ್ಷೆಯನ್ನು ಬರೆಯುವ ಅವಕಾಶವನ್ನು ಒದಗಿಸಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವ* ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑