Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಬಹು ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಿದ್ಧತೆ

Posted date: 29 Apr, 2020

Powered by:     Yellow and Red

ಜಿಲ್ಲೆಯಲ್ಲಿ ಬಹು ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಿದ್ಧತೆ

ರಾಮನಗರ:ಏ/೨೯/೨೦/ಬುಧವಾರ. ಪ್ರತಿದಿನ ಉತ್ಪತ್ತಿಯಾಗುವ ತ್ಯಾಜ್ಯವಸ್ತುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯಗಳನ್ನು ಪಂಚಾಯಿತಿವಾರು ವಿಲೇವಾರಿಯಾದರೆ ಬಹಳಷ್ಟು ಸಮಸ್ಯೆಗಳನ್ನು ಪರಿಹರಿಸಬಹುದು. ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದು.


ಸ್ವಚ್ಛತೆಗೆ ಹಚ್ಚಿನ ಆದ್ಯತೆ ನೀಡಬೇಕು. ಗ್ರಾಮೀಣ  ಜನರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಬಹು ಗ್ರಾಮ ಪಂಚಾಯಿತಿಗಳ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಕಛೇರಿಯ ಜಸ್ವಂತ್ ರವರು ತಿಳಿಸಿದರು.


ಈ ಕುರಿತಂತೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಘಟಕ ಸ್ಥಾಪನೆ ಕುರಿತಂತೆ ಬೇಕಿರುವ ವ್ಯವಸ್ಥೆಗಳು, ಸಿದ್ಧತೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಂಗಳವಾರ ರಾಜ್ಯ ಕಚೇರಿಯ ಜಸ್ವಂತ್ ಅವರು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲೆಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಎರಡು ಬಹು ಗ್ರಾಮ ಪಂಚಾಯಹಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ, ಕಾರ್ಯದರ್ಶಿ ಉಮೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑