Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್‌ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ

Posted date: 03 May, 2020

Powered by:     Yellow and Red

ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ಆನ್‌ಲೈನ್ ತರಗತಿಗಳು ಪ್ರಾರಂಭ ಡಾ ವಿಜಯ ಪ್ರಕಾಶ

ರಾಮನಗರ:ಮೇ/೦೩/೨೦/ಭಾನುವಾರ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ೨೦೧೯-೨೦ ನೇ ಶೈಕ್ಷಣಿಕ ಸಾಲಿನ ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ ಪ್ರವೇಶಾತಿ ಪಡೆದಿರುವ ಪ್ರಥಮ ಬಿ.ಎ., ಬಿ.ಕಾಂ., ಹಾಗೂ ೨೦೧೮-೧೯ನೇ ಶೈಕ್ಷಣಿಕ ಸಾಲಿನ ದ್ವಿತೀಯ ಬಿ.ಎ., ಬಿ.ಕಾಂ., ವಿದ್ಯಾರ್ಥಿಗಳಿಗೆ ಮೇ ೦೧ ರಿಂದ ಆನ್‌ಲೈನ್ ಮುಖಾಂತರ ಸಂಪರ್ಕ ತರಗತಿಗಳು ಪ್ರಾರಂಭವಾಗಿದೆ. ಈಗಾಗಲೇ ಎಲ್ಲಾ ವಿದ್ಯಾರ್ಥಿಗಳ ಸಂಚಾರಿ ದೂರವಾಣಿ ಸಂಖ್ಯೆಗಳಿಗೆ ಸುದ್ದಿಯನ್ನು ರವಾನಿಸಲಾಗಿದೆ.


ತರಗತಿಗಳ ವೇಳಾಪಟ್ಟಿಯು ಕರಾಮುವಿಯ ವೆಬ್‌ಸೈಟ್ *www.ksoumysuru.ac.in*  ಹಾಗೂ ಕೆಎಸ್‌ಒಯು ಸ್ಟೂಡೆಂಟ್ ಆಪ್ ನಲ್ಲಿ ಲಭ್ಯವಿದೆ. ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ ಪ್ರಸಾರವಾಗುವ ತರಗತಿಗಳನ್ನು ಕೇಳಬಹುದು ಹಾಗೂ ವೀಕ್ಷಿಸಬಹುದು. ಇದರ ಸದುಪಯೋಗವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆಯಬೇಕೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ವಿಜಯ್ ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗೆ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಬಿ.ಎಂ. ರಸ್ತೆ, ರಾಮನಗರ ದೂ.ಸಂಖ್ಯೆ: ೯೯೮೬೪೫೮೦೫೫,  ೮೮೬೧೭೩೨೪೮೭,  ೮೬೬೦೪೬೦೨೬೧ ಮತ್ತು ೯೭೪೩೧೮೪೮೪೮ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑