Tel: 7676775624 | Mail: info@yellowandred.in

Language: EN KAN

    Follow us :


ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ

Posted date: 04 May, 2020

Powered by:     Yellow and Red

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ

ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು (೦೨) ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.


ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳಲ್ಲಿತ್ತು, ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.


ಕಳೆದ ಭಾನುವಾರ (ಮೇ ೦೩) ಒಟ್ಟು ೯೫೧ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಅಂದಾಜು ೩೦ ಸಾವಿರ  ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿರುತ್ತಾರೆ.


ಮೇ ೦೪ ರಂದು ಈಗಾಗಲೇ ೫೦ ಬಸ್ ಗಳಲ್ಲಿ ಸುಮಾರು ೧,೫೦೦ ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ ೫೫೦ ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ ೪೦೦ ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ.


ಶನಿವಾರದಂದು (ಮೇ ೦೨) ಕೂಡ ೫೫೦ ಬಸ್ ಗಳಲ್ಲಿ ಅಂದಾಜು ೧೬,೫೦೦ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ.


ಮೇ ೦೪ ರಂದು ಎರಡು ರೈಲುಗಳು ಬಿಹಾರದ ಪಾಟ್ನಾ ಮತ್ತು ಜಾರ್ಖಂಡ್ ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಸ್ಸಾದ ಭುವನೇಶ್ವರಕ್ಕೆ ಒಂದು ರೈಲು, ಒಟ್ಟು ನಾಲ್ಕು ರೈಲುಗಳು ೪,೮೦೦ ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ.


ಮೇ ೦೪ ರಂದು ಮತ್ತೆರಡು ರೈಲುಗಳು ರಾಜಸ್ಥಾನದ ಜೈಪುರ್ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ.


ಪ್ರಯಾಣಕ್ಕಿಂತ ಮೊದಲು ಎಲ್ಲಾ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑