Tel: 7676775624 | Mail: info@yellowandred.in

Language: EN KAN

    Follow us :


ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

Posted date: 05 May, 2020

Powered by:     Yellow and Red

ರಾಮನಗರ:ಮೇ/೦೫/೨೦/ಮಂಗಳವಾರ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ೨೦೨೦-೨೧ ನೇ ಸಾಲಿನ ಹೊಲಿಗೆ ತರಬೇತಿ ಕೇಂದ್ರಕ್ಕೆ ಪ್ರವೇಶ ಪಡೆದುಕೊಳ್ಳಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ನಮೂನೆಯನ್ನು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಮೇ ೩೦ ರೊಳಗೆ ರಾಮನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಥವಾ ಹೊಲಿಗೆ ತರಬೇತಿ ಕೇಂದ್ರ, ಹೆಚ್.ಪಿ ಗ್ಯಾಸ್ ಆಫೀಸ್ ರಸ್ತೆ, ವಿವೇಕಾನಂದನಗರ, ರಾಮನಗರ ಟೌನ್. ಇಲ್ಲಿಗೆ ಸಲ್ಲಿಸಬಹುದಾಗಿದೆ.


ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುವ ಪ್ರತಿ ಅಭ್ಯರ್ಥಿಗೆ ಮಾಹೆಯಾನ ೩೦೦ ರೂ.ಗಳಂತೆ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ೭ ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ತಹಶೀಲ್ದಾರ್ ಅವರಿಂದ ಪಡೆದ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು. ಪ್ರವರ್ಗ-೧, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಯು ೨.೫೦ ಲಕ್ಷ ಆದಾಯ ಮೀರದಂತೆ ಹಾಗೂ ೨ಎ, ೨ಬಿ, ೩ಎ ಮತ್ತು ೩ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಯು ೧ ಲಕ್ಷ ಆದಾಯ ಮೀರಿರಬಾರದು. ೦೪ ಸ್ಟಾಂಪ್ ಅಳತೆ ಹಾಗೂ ೦೪ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ಹಾಗೂ ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಗುವುದು.


ಹೆಚ್ಚಿನ ಮಾಹಿತಿಗೆ ಮೊ.ನಂ. ೮೯೭೧೮೧೬೭೦೨ ಅಥವಾ ೭೦೧೯೨೦೨೧೧೬ ಗೆ ಸಂಪರ್ಕಿಸಬೇಕೆಂದು ರಾಮನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑