Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಗದೀಶ್ ರವರಿಂದ ಪರಿಶೀಲನೆ

Posted date: 08 May, 2020

Powered by:     Yellow and Red

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಗದೀಶ್ ರವರಿಂದ ಪರಿಶೀಲನೆ

ರಾಮನಗರ:ಮೇ/೦೮/೨೦/ಶುಕ್ರವಾರ. ಹೊರ ರಾಜ್ಯದಿಂದ ಜಿಲ್ಲೆಗೆ ಆಗಮಿಸುವವರು ಸೇವಾ ಸಿಂಧೂವಿನಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದು, ಅವರು ಜಿಲ್ಲೆಗೆ ಆಗಮಿಸಿದ ನಂತರ ಅವರ ಆರೋಗ್ಯವನ್ನು ತಪಾಸಣೆಗೆ ಒಳಪಡಿಸಿ ಕ್ವಾರಂಟೈನ್ ಮಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜೆ. ಜಗದೀಶ್ ಅವರು ಮಾಹಿತಿ ಪಡೆದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಕ್ವಾರಂಟೈನ್ ಮಾಡಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರೊಂದಿಗೆ ಚರ್ಚಿಸಿದರು.

ಜಿಲ್ಲಾಧಿಕಾರಿಗಳು ಮಾತನಾಡಿ ಹೊರ ರಾಜ್ಯಗಳಿಂದ ಜಿಲ್ಲೆಗೆ ಬರಲು ಸುಮಾರು ೩೦೦ ಜನರು ಹೆಸರು ನೋಂದಾಯಿಸಿದ್ದು, ಸರ್ಕಾರ ನೀಡಿರುವ ಸೂಚನೆಗಳ ಪ್ರಕಾರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.


ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿದ್ದು, ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಣೆಗೆ ಸರ್ಕಾರದ ಹೊರಡಿಸಿರುವ ಸೂಚನೆಗಳನ್ವಯ ಕಾರ್ಯನಿರ್ವಹಿಸಬೇಕು. ಕೈಗಾರಿಕೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ, ನರೇಗಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪ್ ಶೆಟ್ಟಿ, ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑