Tel: 7676775624 | Mail: info@yellowandred.in

Language: EN KAN

    Follow us :


ಆಶಾ ಕಾರ್ಯಕರ್ತೆಯರಿಗೆ ೩೦೦೦ ರೂ. ಸಹಾಯಧನ ವಿತರಣೆ*

Posted date: 08 May, 2020

Powered by:     Yellow and Red

ಆಶಾ ಕಾರ್ಯಕರ್ತೆಯರಿಗೆ ೩೦೦೦ ರೂ. ಸಹಾಯಧನ ವಿತರಣೆ*

ರಾಮನಗರ:ಮೇ/೦೮/೨೦/ಶುಕ್ರವಾರ. ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ರಾಮನಗರದ ೨೨೫ ಆಶಾ ಕಾರ್ಯಕರ್ತೆಯರಿಗೆ ೩,೦೦೦ ಸಹಾಯಧನವನ್ನು ಸಹಕಾರ ಹಾಗು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ವಿತರಿಸಿದರು.

ಅವರು ಇಂದು ರಾಮನಗರ ಆದಿಚುಂಚನಗಿರಿ ಶಾಖಾ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಆಶಾ ಕಾರ್ಯಕರ್ತೆಯರು, ನರ್ಸ್ ಹಾಗೂ ವೈದ್ಯರ ಸೇವೆ ಶ್ಲಾಘನೀಯ ಹಾಗೂ ಬೆಲೆಕಟ್ಟಲು ಸಾಧ್ಯವಿಲ್ಲ. ಅವರ ಕೆಲಸವನ್ನು ಗೌರವಿಸುವ ದೃಷ್ಠಿಯಿಂದ ೩,೦೦೦ ಸಹಾಯಧನವನ್ನು ಒಂದು ಸಣ್ಣ ಸೇವೆಯಾಗಿ ನಾವು ಅವರಿಗೆ ಸಲ್ಲಿಸುತ್ತಿದ್ದೇವೆ ಎಂದರು.


ಆಶಾ ಕಾರ್ಯಕರ್ತೆಯರ ಜೊತೆಯಲ್ಲಿ ಸೇವೆ ಸಲ್ಲಿಸುತ್ತಿರುವ ೭೯ ದಾದಿಯರಿಗೂ ಸಹಾಯಧನ ನೀಡಲಾಗುವುದು ಎಂದರು.

ಮೈಸೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಎಫ್.ಐ.ಆರ್ ದಾಖಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರಿಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯವು ಕೊವಿಡ್-೧೯ ಮುಕ್ತವಾದ ನಂತರ ಮಾನ್ಯ ಮುಖ್ಯಮಂತ್ರಿಗಳು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಕೋವಿಡ್-೧೯ ರ ನಿಯಂತ್ರಣದಲ್ಲಿ ಶ್ರಮಿಸಿದ ವೈದ್ಯರು, ನರ್ಸ್, ಆಶಾಕಾರ್ಯಕರ್ತೆಯರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸಲಿದ್ದಾರೆ ಎಂದರು.


ಪ್ರತಿದಿನ ೧೦,೦೦೦ ಕ್ಕೂ ಹೆಚ್ಚು ಜನರನ್ನು ಕೊವಿಡ್-೧೯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕೋವಿಡ್ ರೋಗಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಹಾಗೂ ಕೋವಿಡ್ ರೋಗ ಕಂಡು ಬಂದವರನ್ನು ಗುಣಮುಖ ಮಾಡಲು ಶ್ರಮಿಸಲಾಗುತ್ತಿದೆ. ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಿಗೆ ತಿಳಿಸಲಾಗಿದೆ ಈ ಬಗ್ಗೆ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದರು.


ಆದಿಚುಂಚನಗಿರಿ ಶಾಖಾಮಠದ   ಕಾರ್ಯದರ್ಶಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ, ಮಾಗಡಿ ಶಾಸಕ ಎ ಮಂಜು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರುದ್ರೇಶ್ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑