Tel: 7676775624 | Mail: info@yellowandred.in

Language: EN KAN

    Follow us :


ಪಬ್ಲಿಕ್‌ ಟಿವಿ ವರದಿಗಾರ ಹನುಮಂತು ಪತ್ನಿಗೆ ಕೆಎಂಎಫ್‌ನಲ್ಲಿ ಉದ್ಯೋಗ: ಡಾ. ಅಶ್ವತ್ಥನಾರಾಯಣ

Posted date: 11 May, 2020

Powered by:     Yellow and Red

ಪಬ್ಲಿಕ್‌ ಟಿವಿ ವರದಿಗಾರ ಹನುಮಂತು ಪತ್ನಿಗೆ ಕೆಎಂಎಫ್‌ನಲ್ಲಿ ಉದ್ಯೋಗ: ಡಾ. ಅಶ್ವತ್ಥನಾರಾಯಣ

ರಾಮನಗರ:ಮೇ/೧೧/೨೦/ಸೋಮವಾರ. ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿವಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ಪತ್ನಿಗೆ ಕೆಎಂಎಫ್‌ ಜಿಲ್ಲಾ ಒಕ್ಕೂಟದಲ್ಲಿ ಕೆಲಸ ಕೊಡಿಸುವುದಾಗಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು ಭರವಸೆ ನೀಡಿದ್ದಾರೆ. 


ಹಾರೋಹಳ್ಳಿಯ ಪಡುವಣಗೆರೆಯಲ್ಲಿರುವ ಹನುಮಂತು ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿ ಅವರು, ಕೆಎಂಎಫ್‌ ಅಧ್ಯಕ್ಷರಿಗೆ ಪತ್ರ ಬರೆದು, ಅವರ ಜತೆ ಮಾತನಾಡಿ  ಜಿಲ್ಲಾ ಹಾಲು ಒಕ್ಕೂಟದಲ್ಲಿ ಹನಮಂತು ಅವರ ಪತ್ನಿ ಎನ್‌. ಶಶಿಕಲಾ ಅವರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು. ಜತೆಗೆ,  ಸರ್ಕಾರದ ಕಡೆಯಿಂದ ಬರಬೇಕಿರುವ ಐದು ಲಕ್ಷ ರೂ. ಪರಿಹಾರ ಕೊಡಿಸುವುದಾಗಿಯೂ ಭರವಸೆ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑