Tel: 7676775624 | Mail: info@yellowandred.in

Language: EN KAN

    Follow us :


ಪುಸ್ತಕ ಪ್ರಾಧಿಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

Posted date: 11 May, 2020

Powered by:     Yellow and Red

ಪುಸ್ತಕ ಪ್ರಾಧಿಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ : ಅವಧಿ ವಿಸ್ತರಣೆ

ರಾಮನಗರ:ಮೇ/೧೧/೨೦/ಸೋಮವಾರ. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೯ ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಕೋವಿಡ್-೧೯ ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಮೇ ೩೦ ರ ವರೆಗೆ ವಿಸ್ತರಿಸಲಾಗಿದೆ.


ಅರ್ಜಿದಾರರು ೧೮ ರಿಂದ ೪೦ ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ದೃಢೀಕರಿಸಲ್ಪಟ್ಟ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.


ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ ೧/೮ ಡೆಮ್ಮಿ ಅಳತೆಯಲ್ಲಿ ಕನಿಷ್ಠ ೬೦ ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ/ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ.


ಅರ್ಜಿಗಳನ್ನು ಮೇ ೩೦ ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-5960002ಗೆ ಕಳುಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-22484516/ 22017704ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑