Tel: 7676775624 | Mail: info@yellowandred.in

Language: EN KAN

    Follow us :


ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಹುಮಾನಕ್ಕೆ ಅರ್ಜಿ ಆಹ್ವಾನ

Posted date: 11 May, 2020

Powered by:     Yellow and Red

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಹುಮಾನಕ್ಕೆ ಅರ್ಜಿ ಆಹ್ವಾನ

ರಾಮನಗರ:ಮೇ/೧೧/೨೦/ಸೋಮವಾರ.ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ ೨೦೧೯ ರಿಂದ ಡಿಸೆಂಬರ್ ೨೦೧೯ ರವರೆಗೆ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.


ಕೋವಿಡ್-೧೯ ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪುಸ್ತಕ ಕಳಿಸುವ ಕೊನೆಯ ದಿನಾಂಕವನ್ನು ಮೇ ೩೦ ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.


ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ೨೦೨೦ ರ ಮೇ ೩೦ ರ ಒಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆಸಿ ರಸೆ,್ತ ಬೆಂಗಳೂರು 560002. ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆಸಿ ರಸ್ತೆ, ಬೆಂಗಳೂರು 560002 – ವೆಬ್ ಸೆಟ್ www.Kannadapustakapradhikara.com, ದೂರವಾಣಿ ಸಂಖ್ಯೆ 080-22484516/ 22107704 ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑