Tel: 7676775624 | Mail: info@yellowandred.in

Language: EN KAN

    Follow us :


ನಾಳೆ (ಮೇ ೧೬) ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ

Posted date: 15 May, 2020

Powered by:     Yellow and Red

ನಾಳೆ (ಮೇ ೧೬) ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ

ರಾಮನಗರ:ಮೇ/೧೫/೨೦/ಶುಕ್ರವಾರ. ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಡೆಂಗ್ಯೂ ನಿಯಂತ್ರಣದಲ್ಲಿ ರೋಗ ಪ್ರಸರಣ ಅವಧಿಯ ಮುನ್ನವೇ ಸಮುದಾಯವನ್ನು ಸಜ್ಜುಗೊಳಿಸುವಿಕೆ ಮತ್ತು ಇತರೆ ಇಲಾಖೆಗಳ ಸಹಯೋಗದ ಮೂಲಕ ಡೆಂಗ್ಯೂ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ವ್ಯಾಪಕ ಜನ ಜಾಗೃತಿ ಅಭಿಯಾನವನ್ನು ಮಾಡುವ ಉದ್ದೇಶದಿಂದ ಮೇ ೧೬ ರಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.


ಮಳೆಗಾಲವು ಪ್ರಾರಂಭವಾಗುತ್ತಿದ್ದು ಡೆಂಗ್ಯೂ ಮತ್ತು ಚಿಕುನ್‌ಗುನ್ಯಾ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗುತ್ತಿರುವುದರಿಂದ ಡೆಂಗ್ಯೂ ರೋಗದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ಪರಿಸರ ನೈರ್ಮಲ್ಯ ಹಾಗೂ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವಂತೆ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಳ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.


ಡೆಂಗೀ / ಚಿಕುಂಗುನ್ಯಾ ವೈರಸ್‌ನಿಂದ ಉಂಟಾಗುವ ಜ್ವರಗಳು, ರಕ್ತ ಪರೀಕ್ಷೆಯಿಂದ ಮಾತ್ರ ಪತ್ತೆ ಹಚ್ಚಬಹುದು. ಹಗಲಿನಲ್ಲಿ ಕಚ್ಚುವ ಸೋಂಕಿತ ಈಡೀಸ್ ಸೊಳ್ಳೆಗಳಿಂದ ಈ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತವೆ. ಈಡೀಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿನ ತೊಟ್ಟಿ, ಬ್ಯಾರಲ್, ಡ್ರಮ್‌ಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಸ್ವಚ್ಛಗೊಳಿಸಿ ಪುನಃ ನೀರು ತುಂಬಿ ಮತ್ತು ಎಲ್ಲಾ ನೀರಿನ ಶೇಖರಣೆಗಳನ್ನು ಮುಚ್ಚಿಡಿ. ಮನೆ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ, ಘನ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಪರಿಸರವನ್ನು ಸ್ವಚ್ಛವಾಗಿಡಿ.


ಸೊಳ್ಳೆಗಳು ಕಚ್ಚದಂತೆ ಮೈ ತುಂಬಾ ಬಟ್ಟೆಧರಿಸಿ, ಸೊಳ್ಳೆ ಬತ್ತಿ, ಮುಲಾಮು, ದ್ರಾವಣ ಇವುಗಳನ್ನು ಉಪಯೋಗಿಸಿ. ಡೆಂಗೀ/ಚಿಕುಂಗುನ್ಯಾ ರೋಗಿಗಳು ತಪ್ಪದೇ ಸೊಳ್ಳೆಯ ಪರದೆಯನ್ನು ಉಪಯೋಗಿಸುವುದು. ರಕ್ತ ಪರೀಕ್ಷೆ ಮತ್ತು ಚಿಕಿತ್ಸೆ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ. ಈಡೀಸ್ ಲಾರ್ವಾ ಸಮೀಕ್ಷೆಗಾಗಿ ನಿಮ್ಮ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಸ್ವಯಂ ಸೇವಕರಿಗೆ ಸಹಕಾರ ನೀಡಿ, ಅವರ ಸಲಹೆಗಳನ್ನು ಪಾಲಿಸಿ. ಯಾವುದೇ ಜ್ವರವಿರಲಿ ನಿರ್ಲಕ್ಷಿಸದೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಇಲಾಖೆಯ ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ ೧೦೪ ಕ್ಕೆ ಸಂಪರ್ಕಿಸಲು ಕೋರಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑