Tel: 7676775624 | Mail: info@yellowandred.in

Language: EN KAN

    Follow us :


ಚಿರತೆ ಸೆರೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ ಅರಣ್ಯ ಸಂರಕ್ಷಣಾಧಿಕಾರಿ

Posted date: 16 May, 2020

Powered by:     Yellow and Red

ಚಿರತೆ ಸೆರೆಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ ಅರಣ್ಯ ಸಂರಕ್ಷಣಾಧಿಕಾರಿ

ರಾಮನಗರ:ಮೇ/೧೬/೨೦/ಶನಿವಾರ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಮಹಿಳೆಯೋರ್ವರು ಚಿರತೆ ದಾಳಿಗೆ ಮೃತಪಟ್ಟಿರುತ್ತಾರೆ. ಈ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯುವವರೆಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೊಟ್ಟಗಾಣಹಳ್ಳಿಯ ೬೨ ವರ್ಷದ ಮಹಿಳೆ ಚಿರತೆ ದಾಳಿಗೆ ಮೃತ ಪಟ್ಟಿರುವ ಹಿನ್ನೆಲೆಯಲ್ಲಿ ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆಯು ವಿವಿಧ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ, ಸಾರ್ವಜನಿಕರು ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಸಾರ್ವಜನಿಕರನ್ನು ಅರಣ್ಯ ಇಲಾಖೆಯು ಎಚ್ಚರಿಸಿದೆ.


ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ವತಿಯಿಂದ ಮಾನವ-ಪ್ರಾಣ ಹಾನಿ ಘಟನೆ ನಡೆದ ಸ್ಥಳದ ಸುತ್ತಮುತ್ತ ಕ್ಯಾಮರಾ ಟ್ರ್ಯಾಪ್‌ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದರಿ ಪ್ರದೇಶದಲ್ಲಿ ಬೋನುಗಳನ್ನು ಇರಿಸಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಇಲಾಖಾ ಕ್ಷೇತ್ರಾಧಿಕಾರಿಗಳು ಹಗಲು-ರಾತ್ರಿ ಈಗಾಗಲೇ ಗಸ್ತು/ಪಹರೆ ತಿರುಗುವಂತೆ ಸೂಚಿಸಲಾಗಿದೆ.


ಚಿರತೆ ಹಾವಳಿ ತಡೆಗಟ್ಟಲು ರಚಿಸಲಾಗಿರುವ ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡ ಕಾರ್ಯಾಚರಣೆ ತೀವ್ರ ಪ್ರಗತಿಯಲ್ಲಿದೆ. ಹೀಗಾಗಿ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ವನ್ಯಜೀವಿ ಪರಿಪಾಲಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಯಾವುದೇ ಕಾರಣಕ್ಕೂ ಒಂಟಿಯಾಗಿ ಓಡಾಡತಕ್ಕದ್ದಲ್ಲ. ಗುಂಪಾಗಿ ಚಲಿಸತಕ್ಕದ್ದು ಮತ್ತು ಸಂಜೆ ೦೬ ಗಂಟೆಯೊಳಗೆ ಮನೆಗೆ ಸೇರುವುದು. ಬಯಲು ಬಹಿರ್ದೇಶಿಗೆ ಹೋಗಬಾರದು. ಚಿರತೆಯು ಕಂಡಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನ ಸೇರಿ ಗದ್ದಲ ಮಾಡಬಾರದು. ಈ ಬಗ್ಗೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.


ದನಗಳನ್ನು ಮೇಯಿಸಲು ಮತ್ತು ಹೊಲಕ್ಕೆ ಹೋದಾಗ ಬಯಲು ಪ್ರದೇಶದಲ್ಲಿ ಕುಳಿತುಕೊಳ್ಳಬೇಕು. ಪೊದೆಗಳ ಬಳಿ ಒಂಟಿಯಾಗಿ ಕೂರಬಾರದು ಹಾಗೂ ಚಿರತೆಯ ಬಗ್ಗೆ ಸದಾಕಾಲ ಎಚ್ಚರಿಕೆಯಿಂದ ಇರಬೇಕು. ಸಂಜೆ ಆರು ಗಂಟೆಯ ನಂತರ ಎಲ್ಲಾ ಸಾಕು ಪ್ರಾಣಿಗಳನ್ನು ಮನೆ ಇಲ್ಲವೆ ಕೊಟ್ಟಿಗೆ ಒಳಗೆ ಕೂಡಿಹಾಕಬೇಕು. ಸಾಕು ಪ್ರಾಣಿಯನ್ನು ಚಿರತೆಯು ಹತ್ಯೆ ಮಾಡಿದಲ್ಲಿ ಅದನ್ನು ಮುಟ್ಟಬಾರದು ಮತ್ತು ಕೂಡಲೆ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಇಂದು ತಿಳಿಸಿದೆ.


ಚಿರತೆಯ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಅರಣ್ಯ ಇಲಾಖೆಯ ಸಹಾಯವಾಣಿ ಸಂಖ್ಯೆ: ೧,೯೨೬ ಅಥವಾ ರಾಮನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೊ.ನಂ. 9448381927ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಕೋರಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑