Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ: ಜಿಲ್ಲೆಯಲ್ಲಿ ಮೊದಲ ಪ್ರಕರಣ ಧೃಢ ಜಿಲ್ಲಾಧಿಕಾರಿ ಘೋಷಣೆ

Posted date: 25 May, 2020

Powered by:     Yellow and Red

ಕೊರೊನಾ: ಜಿಲ್ಲೆಯಲ್ಲಿ ಮೊದಲ ಪ್ರಕರಣ ಧೃಢ ಜಿಲ್ಲಾಧಿಕಾರಿ ಘೋಷಣೆ

ರಾಮನಗರ:ಮೇ/೨೫/೨೦/ಸೋಮವಾರ. ರಾಮನಗರ ಜಿಲ್ಲೆಯಲ್ಲಿ ಮೊದಲ ಕೊರೋನಾ (ಕೋವಿಡ್-೧೯) ಪ್ರಕರಣವೊಂದು ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಮೇ ೨೫ ರ ವರದಿಯಲ್ಲಿ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ದೃಡಪಟ್ಟಿದೆ ಎಂದು ನಮೂದಿಸಲಾಗಿದೆ.


ಪಿಡುಗು ತಡೆ ಕುರಿತ  ಪ್ರಕರಣಗಳಿಗೆ ಸಂಬಧಪಟ್ಟಂತೆ ಸೋಮವಾರದ (ಮೇ ೨೫) ಇನ್ನುಳಿದ ಅಂಕಿ - ಅಂಶಗಳು ಹೀಗಿವೆ. ಇದುವರೆಗೆ  ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೩,೩೯೯ (ಹೊಸದಾಗಿ ಇಂದಿನ ೬೬ ಸೇರಿ). ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೧,೦೦೬ ಜನರಿದ್ದಾರೆ. ಇಂದು ಹೊಸದಾಗಿ ಪೂರೈಸಿದವರು ಯಾರೂ ಇರುವುದಿಲ್ಲ. ೧೪ ದಿನಗಳ ನಿಗಾ ಅವಧಿ ಪೂರೈಸಿದವರು ೧,೦೪೦ ಜನರಾಗಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ೯೪೬ ಜನರಾಗಿದ್ದಾರೆ. (ಹೊಸದಾಗಿ ಇಂದಿನ ೩೫ ಜನ).


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೨೬ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೧,೪೭೯ ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಇಬ್ಬರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ೨೩ ಜನ ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೨೮೩ ಕ್ಕೆ ಏರಿಕೆಯಾಗಿದೆ. 


ಇಂದು ಹೊಸದಾಗಿ ೮೮ ಮಾದರಿಗಳನ್ನು

ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೩,೩೧೦ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೯೬ ಮಾದರಿಗಳು ನಕಾರಾತ್ಮಕವಾಗಿವೆ. ಇದುವರೆಗೆ ಒಟ್ಟು ೨,೯೩೬ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿರುತ್ತದೆ. ಇಂದಿನ ೮೮ ಬಾಕಿ ವರದಿ ಸೇರಿ ಒಟ್ಟು ೩೭೪ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑