Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ. ಜಿಲ್ಲಾಧಿಕಾರಿ

Posted date: 27 May, 2020

Powered by:     Yellow and Red

ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ. ಜಿಲ್ಲಾಧಿಕಾರಿ

ರಾಮನಗರ:ಮೇ/೨೭/೨೦/ಬುಧವಾರ. ರಾಮನಗರ ಜಿಲ್ಲೆಯಲ್ಲಿ ಇಂದು ಸಹ ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೊಸದಾಗಿ ಧೃಡಪಟ್ಟಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.


ಕೋವಿಡ್ ನಿಯಂತ್ರಣಕ್ಕೆ ಸಂಬಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರದ (ಮೇ ೨೭) ವರದಿಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ದಾಖಲಾಗಿರುವ ಹೊರತು ಹೊಸ ಪ್ರಕರಣ ಪತ್ತೆಯಾಗಿಲ್ಲ ಎಂದು ನಮೂದಿಸಲಾಗಿದೆ.


ಪಿಡುಗು ತಡೆ ಕುರಿತ ಪ್ರಕರಣಗಳಿಗೆ ಸಂಬಧಪಟ್ಟಂತೆ ಇಂದಿನ ಇನ್ನುಳಿದ ಅಂಕಿ - ಅಂಶಗಳು ಹೀಗಿವೆ. ಇದುವರೆಗೆ  ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೩,೫೭೯ (ಹೊಸದಾಗಿ ಇಂದಿನ ೭೦ ಸೇರಿ). ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೧,೦೦೬ ಜನರಿದ್ದಾರೆ. ಇಂದು ಹೊಸದಾಗಿ ಪೂರೈಸಿದವರು ಯಾರೂ ಇರುವುದಿಲ್ಲ. ೧೪ ದಿನಗಳ ನಿಗಾ ಅವಧಿ ಪೂರೈಸಿದವರು ೧,೨೬೧ ಜನರಾಗಿದ್ದಾರೆ. ಹೊಸದಾಗಿ ಇಂದಿನ ೬೬ ಜನ ಸೇರಿ ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ೯೨೫ ಜನರಾಗಿದ್ದಾರೆ.


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೨೭ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೧,೫೪೦ ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಇಬ್ಬರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು ಇಬ್ಬರು ಸೇರ್ಪಡೆಯಾಗುವುದರೊಂದಿಗೆ ಒಟ್ಟಾರೆ ಸಂಖ್ಯೆ ೨೫೯ ಕ್ಕೆ ಏರಿಕೆಯಾಗಿದೆ.


ಇಂದು ಹೊಸದಾಗಿ ೧೦೪ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೩,೫೪೫ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೫೦ ಮಾದರಿಗಳ ಫಲಿತಾಂಶ ನಕಾರಾತ್ಮಕವಾಗಿವೆ. ಇದುವರೆಗೆ ಒಟ್ಟು ೩,೧೫೪ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿರುತ್ತದೆ. ಇಂದಿನ ೧೦೪ ಬಾಕಿ ವರದಿ ಸೇರಿ ಒಟ್ಟು ೩೯೦ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑