Tel: 7676775624 | Mail: info@yellowandred.in

Language: EN KAN

    Follow us :


ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

Posted date: 28 May, 2020

Powered by:     Yellow and Red

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯ ನೇ ಸಾಲಿನಲ್ಲಿ ನಗದು ಪುರಸ್ಕಾರಕ್ಕಾಗಿ ಅರ್ಜಿ ಸ್ವೀಕರಿಸುವ ಅವಧಿಯನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿ

ಮೇ ೩೦ ರ ವರೆಗೆ ವಿಸ್ತರಿಸಿದೆ.


ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.


ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಮನಗರ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಮಾರ್ಗಸೂಚಿ ಅನ್ವಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ದಾಖಲೆಗಳೊಂದಿಗೆ ಮೇ ೩೦ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ 080-27274655ಗೆ ಸಂಪರ್ಕಿಸುವಂತೆ ರಾಮನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑