Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಜಿಲ್ಲೆಯಲ್ಲಿ ಮತ್ತೆರಡು ಹೊಸ ಪ್ರಕರಣ ದೃಢ ಜಿಲ್ಲಾಧಿಕಾರಿ

Posted date: 04 Jun, 2020

Powered by:     Yellow and Red

ಕೊರೋನಾ: ಜಿಲ್ಲೆಯಲ್ಲಿ ಮತ್ತೆರಡು ಹೊಸ ಪ್ರಕರಣ ದೃಢ ಜಿಲ್ಲಾಧಿಕಾರಿ

ರಾಮನಗರ:ಜೂ:೦೪/೨೦/ಗುರುವಾರ. ರಾಮನಗರ ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ (ಕೋವಿಡ್-೧೯) ಪಾಸಿಟಿವ್ ಪ್ರಕರಣ ಗುರುವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


ರಾಮನಗರದ ಕುಂಬಾರ ಬೀದಿಯ ೫೭ ವರ್ಷ ವಯಸ್ಸಿನ ವ್ಯಕ್ತಿ ಓರ್ವರಿಗೆ (ಪಿ-೩೩೧೩) ಜೂನ್ ೦೧ ರಂದು ಕೊರೊನಾ ಇರುವುದು ದೃಢಪಟ್ಟಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ.


ಇನ್ನೊಂದು ಪ್ರಕರಣದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಶ್ಯಾನಬೋಗನಹಳ್ಳಿಯ ೨೭ ವರ್ಷದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿರುತ್ತದೆ. ಇವರನ್ನು ರಾಮನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದೆ.


ಕಳೆದ ಮೇ ೨೫ ರಂದು ಚೆನ್ನೈನಿಂದ ಹಿಂದಿರುಗಿದ್ದ ಎರಡು ವರ್ಷದ ಬಾಲಕನಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು. ಜೂನ್ ೦೧ ರಂದು ಮತ್ತೊಂದು ಕೋವಿಡ್ ಪ್ರಕರಣ ರಾಮನಗರದಲ್ಲಿ ದೃಢಪಟ್ಟಿತ್ತು. ಇಂದು ರಾಮನಗರ ಮತ್ತು ಚನ್ನಪಟ್ಟಣಗಳಲ್ಲಿ ತಲಾ ಒಂದೊಂದು ಪ್ರಕರಣ ದೃಢಪಡುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಗೊಂಡಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


*ಜಿಲ್ಲಾ ಆರೋಗ್ಯ ಇಲಾಖೆ ವರದಿ:*

ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರ (ಜೂ ೦೪) ಇನ್ನುಳಿದ ಅಂಕಿ - ಅಂಶಗಳು ಹೀಗಿವೆ.


ಇದುವರೆಗೆ  ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೪,೫೭೩ (ಹೊಸದಾಗಿ ಇಂದಿನ ೯೮ ಸೇರಿ).  ೨೮ ದಿನಗಳ ನಿಗಾ ಅವಧಿ ಪೂರೈಸಿದವರು ೧,೫೫೧ ಜನರಿದ್ದಾರೆ. ಇಂದು ಹೊಸದಾಗಿ ಪೂರೈಸಿದವರು ಇರುವುದಿಲ್ಲ. ೧೪ ದಿನಗಳ ನಿಗಾ ಅವಧಿ ಪೂರೈಸಿದವರು ೧,೪೨೭ ಜನರಾಗಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರುವವರ ೧,೩೪೫ ಜನರಾಗಿದ್ದಾರೆ. (ಹೊಸದಾಗಿ ಇಂದಿನ ೯೨ ಜನ).


ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು ೨೨ ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ ೧,೭೫೯ ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಒಟ್ಟು ೧೩ ಜನ ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್‌ಗೆ ಒಟ್ಟಾರೆ ಸಂಖ್ಯೆ ೧೧೨ ಕ್ಕೆ ಏರಿಕೆಯಾಗಿದೆ.


ಇಂದು ಹೊಸದಾಗಿ ೯೮ ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು ೪,೬೭೧ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದಿನ ೧೧೦ ಮಾದರಿಗಳು ನಕಾರಾತ್ಮಕವಾಗಿವೆ. ಇದುವರೆಗೆ ಒಟ್ಟು ೪,೨೪೬ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿರುತ್ತದೆ. ಇಂದಿನ ೯೮ ಬಾಕಿ ವರದಿ ಸೇರಿ ಒಟ್ಟು ೪೨೧ ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑