Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ಸೋಂಕಿತರಿಗೆ ಸಾಂತ್ವನ

Posted date: 22 Jul, 2020

Powered by:     Yellow and Red

ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ಸೋಂಕಿತರಿಗೆ ಸಾಂತ್ವನ

ರಾಮನಗರ:ಜು/೨೨/೨೦/ಬುಧವಾರ. ರಾಮನಗರ ಜಿಲ್ಲೆಯ ಕೋವಿಡ್ 19 ರೆಫರಲ್ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಇಂದು ಆಸ್ಪತ್ರೆಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರಲ್ಲಿ ಇಲ್ಲಿರುವ ರೋಗಿಗಳು ಸಂತಸ ವ್ಯಕ್ತಪಡಿಸಿದ್ದಾರೆ. 


ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ರಾಮನಗರ ಜಿಲ್ಲೆಯ ಕೋವಿಡ್ -19 ರೆಫರಲ್ ಆಸ್ಪತ್ರೆಗೆ ಜುಲೈ 22 ರಂದು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ರೋಗಿಗಳನ್ನು ಭೇಟಿ ಮಾಡಿ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡಾಗ ಬಹುತೇಕ ಸೋಂಕಿತರು ತಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿರುವುದಾಗಿ ತಿಳಿಸಿ, ಇದಕ್ಕಾಗಿ ಜಿಲ್ಲಾಧಿಕಾರಿಗಳನ್ನು ಅಭಿನಂದಿಸಿದರು.


ಬಳಿಕ, ಸೋಂಕಿತರೊಂದಿಗೆ ಮಾತನಾಡಿ ಅವರು ಇಲ್ಲಿನವರ ಆರೋಗ್ಯವನ್ನು ವಿಚಾರಿಸಿದರು. ಅಲ್ಲದೆ, ಅವರೆಲ್ಲರಲ್ಲಿ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

 

*ಪರಿಶೀಲನೆ:* ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿ ಇರುವ ಸೌಲಭ್ಯಗಳ ಬಗ್ಗೆ ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನೀಡುತ್ತಿರುವ ಊಟ ತಿಂಡಿ ಬಗ್ಗೆ ರೋಗಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಂಡರು.


ಜೊತೆಗೆ, ಶೌಚಾಲಯಕ್ಕೆ ತೆರಳಿ ಅಲ್ಲಿನ ಸ್ವಚ್ಛತೆಯನ್ನು ಪರಿಶೀಲಿಸಿದರು. ಆಸ್ಪತ್ರೆಯ ಆವರಣದಲ್ಲಿ ಸಂಚರಿಸಿ ಅಲ್ಲಿರುವ ಸ್ವಚ್ಛತೆಯನ್ನು ಖಾತ್ರಿ ಪಡಿಸಿಕೊಂಡರು.


*ಭಯ ಬೇಡ:* ತಮಗೆ ಕರೋನಾ ಸೋಂಕಿರುವುದು ದೃಢಪಡುತ್ತಿದ್ದಂತೆ ಜನರು ಭಯ ಬೀಳುವುದು ಸಹಜ. ಇದಕ್ಕಾಗಿ ಗಾಬರಿಪಡುವ ಅಗತ್ಯವಿಲ್ಲ. ರಾಮನಗರ ಜಿಲ್ಲೆಯಲ್ಲಿ ಇರುವ ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಜನರು ಯಾವುದೇ ರೀತಿ ಭಯಕ್ಕೆ ಒಳಗಾಗದೆ ಇಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಬಹುದು ಎಂದು ಇಲ್ಲಿನ ಸೋಂಕಿತರು ಜನರಿಗೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ.


*ತಪ್ಪಿಸಿಕೊಳ್ಳುವ ಅಗತ್ಯವಿಲ್ಲ:* ತಮಗೆ ಸೋಂಕಿರುವುದು ಗೊತ್ತಾಗುತ್ತಿದ್ದಂತೆ ಬಹುತೇಕ ಜನರು ಅದನ್ನು ಮರೆಮಾಚಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ಇನ್ನಷ್ಟು ಅನಾಹುತಕ್ಕೆ ಕಾರಣವಾಗುತ್ತದೆ. ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿದೆ. ಯಾರು ಗಾಬರಿಯಾಗುವ ಅಗತ್ಯವಿಲ್ಲ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರೆ ಗುಣಮುಖರಾಗಬಹುದು. ಹೀಗಾಗಿ, ವಿಶ್ವಾಸದಿಂದ ಈ ಸೋಂಕನ್ನು ಎದುರಿಸುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವಂತೆ ಇಲ್ಲಿರುವವರು ಜಿಲ್ಲಾಧಿಕಾರಿಗಳ ಮೂಲಕ ಜನರಿಗೆ ಮಾಹಿತಿ ನೀಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑