Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಜಿಲ್ಲೆಯಲ್ಲಿ ಇಂದು 34 ಪ್ರಕರಣ ದೃಢ ಜಿಲ್ಲಾಧಿಕಾರಿ

Posted date: 29 Jul, 2020

Powered by:     Yellow and Red

ಕೊರೋನಾ: ಜಿಲ್ಲೆಯಲ್ಲಿ ಇಂದು 34 ಪ್ರಕರಣ ದೃಢ ಜಿಲ್ಲಾಧಿಕಾರಿ

ರಾಮನಗರ:ಜು/29/20/ಬುಧವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 11, ಕನಕಪುರ 2, ಮಾಗಡಿ 3 ಮತ್ತು ರಾಮನಗರ 18 ಪ್ರಕರಣಗಳು ಸೇರಿ ಇಂದು ಒಟ್ಟು 34 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


*ಒಟ್ಟು ಪ್ರಕರಣ:* ಇದುವರೆಗೆ ಜಿಲ್ಲೆಯಲ್ಲಿ 900 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 192,  ಕನಕಪುರ 182, ಮಾಗಡಿ 222 ಮತ್ತು ರಾಮನಗರ 304 ಪ್ರಕರಣಗಳು ಸೇರಿವೆ.


*ಗುಣಮುಖ:* ಇಂದು ಒಟ್ಟು 31 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 7, ಮಾಗಡಿ 15 ಮತ್ತು ರಾಮನಗರ 9 ಜನರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 510 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 93, ಕನಕಪುರ 145, ಮಾಗಡಿ 121 ಮತ್ತು ರಾಮನಗರ 151 ಜನರು ಸೇರಿದ್ದಾರೆ.


*ಸಕ್ರಿಯ ಪ್ರಕರಣ:* ಜಿಲ್ಲೆಯಲ್ಲಿ ದಾಖಲಾಗಿರುವ 900 ಪ್ರಕರಣಗಳ ಪೈಕಿ 510 ಜನರು ಗುಣಮುಖರಾಗಿದ್ದಾರೆ, ಇನ್ನೂ 374 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 374 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 98, ಕನಕಪುರ 35, ಮಾಗಡಿ 92 ಮತ್ತು ರಾಮನಗರ 149 ಪ್ರಕರಣಗಳು ಸೇರಿವೆ.


*ಸಾವು:* ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಬ್ಬರು ಮೃತಪಟ್ಟಿದ್ದು, ಇದುವರೆಗೆ ಕನಕಪುರ ತಾಲ್ಲೂಕಿನಲ್ಲಿ 2, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 16 ಮಂದಿ ನಿಧನರಾಗಿದ್ದಾರೆ.


*ಜಿಲ್ಲಾ ಆರೋಗ್ಯ ಇಲಾಖೆ ವರದಿ:* ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಬುಧವಾರ (ಜುಲೈ 29) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 15,444 (ಹೊಸದಾಗಿ ಇಂದಿನ 260 ಸೇರಿ). ಒಟ್ಟು 6,676 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 256 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 4,376ಗೆ ಏರಿಕೆಯಾಗಿದೆ.


*ಜ್ವರ ತಪಾಸಣೆ:* ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 21 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 4,000 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.


*ಕ್ವಾರಂಟೈನ್:* ಒಟ್ಟು 8 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು 4 ಜನರು ಸೇರಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.


*ಮಾದರಿ ಸಂಗ್ರಹ:* ಇಂದು ಹೊಸದಾಗಿ 260 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 15,996 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 14,438 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 260 ಬಾಕಿ ವರದಿ ಸೇರಿ ಒಟ್ಟು 397 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑