Tel: 7676775624 | Mail: info@yellowandred.in

Language: EN KAN

    Follow us :


ಕೊರೋನಾ: ಚನ್ನಪಟ್ಟಣದ 5 ಮಂದಿ ಸೇರಿ ಜಿಲ್ಲೆಯಲ್ಲಿ ಇಂದು 50 ಪ್ರಕರಣ ದೃಢ

Posted date: 06 Aug, 2020

Powered by:     Yellow and Red

ಕೊರೋನಾ: ಚನ್ನಪಟ್ಟಣದ 5 ಮಂದಿ ಸೇರಿ ಜಿಲ್ಲೆಯಲ್ಲಿ ಇಂದು 50 ಪ್ರಕರಣ ದೃಢ

ರಾಮನಗರ:ಆ/06/20/ಗುರುವಾರ. ಇಂದು ಜಿಲ್ಲೆಯಲ್ಲಿ ಚನ್ನಪಟ್ಟಣ 5, ಕನಕಪುರ 18, ಮಾಗಡಿ 3 ಮತ್ತು ರಾಮನಗರ 24 ಪ್ರಕರಣಗಳು ಸೇರಿ ಇಂದು ಒಟ್ಟು 50 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


 *ಒಟ್ಟು ಪ್ರಕರಣ:* ಇದುವರೆಗೆ ಜಿಲ್ಲೆಯಲ್ಲಿ 1,469 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 329,  ಕನಕಪುರ 299, ಮಾಗಡಿ 270 ಮತ್ತು ರಾಮನಗರ 571 ಪ್ರಕರಣಗಳು ಸೇರಿವೆ.


 *ಗುಣಮುಖ* : ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 7, ಕನಕಪುರ ತಾಲ್ಲೂಕಿನಲ್ಲಿ 5, ಮಾಗಡಿ ತಾಲ್ಲೂಕಿನಲ್ಲಿ 9 ಹಾಗೂ ರಾಮನಗರ ತಾಲ್ಲೂಕಿನಲ್ಲಿ 18 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 640 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 116, ಕನಕಪುರ 150, ಮಾಗಡಿ 173 ಮತ್ತು ರಾಮನಗರ 201 ಜನರು ಸೇರಿದ್ದಾರೆ.


 *ಸಕ್ರಿಯ ಪ್ರಕರಣ:* ಜಿಲ್ಲೆಯಲ್ಲಿ ದಾಖಲಾಗಿರುವ 1,469 ಪ್ರಕರಣಗಳ ಪೈಕಿ 640 ಜನರು ಗುಣಮುಖರಾಗಿದ್ದಾರೆ, ಇನ್ನೂ 812 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 812 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 212, ಕನಕಪುರ 146, ಮಾಗಡಿ 88 ಮತ್ತು ರಾಮನಗರ 366 ಪ್ರಕರಣಗಳು ಸೇರಿವೆ.


 *ಸಾವು* : ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 1, ಕನಕಪುರ ತಾಲ್ಲೂಕಿನಲ್ಲಿ 3, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 4 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 17 ಮಂದಿ ನಿಧನರಾಗಿದ್ದಾರೆ.


 *ಜಿಲ್ಲಾ ಆರೋಗ್ಯ ಇಲಾಖೆ ವರದಿ:* ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಗುರುವಾರ (ಆ. 6) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 18,147 (ಹೊಸದಾಗಿ ಇಂದಿನ 572 ಸೇರಿ). ಒಟ್ಟು 9,211 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 566 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 4,266 ಕ್ಕೆ ಏರಿಕೆಯಾಗಿದೆ.


 *ಜ್ವರ ತಪಾಸಣೆ:* ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 43 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 4,246 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.


 *ಕ್ವಾರಂಟೈನ್* : ಒಟ್ಟು 16 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 48 ಕ್ಕೆ ಇಳಿಕೆಯಾಗಿದೆ.


 *ಮಾದರಿ ಸಂಗ್ರಹ:* ಇಂದು ಹೊಸದಾಗಿ 572 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 18,701 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 16,422 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 302 ಬಾಕಿ ವರದಿ ಸೇರಿ ಒಟ್ಟು 549 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑