ನರೇಗಾ ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ:ಆ/08/20/ಶನಿವಾರ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಸಮರ್ಪಕ ಅನುಷ್ಠಾನಕ್ಕಾಗಿ ರಾಮನಗರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನುರಿತ ಅಕೌಂಟ್ಸ್ ಮ್ಯಾನೇಜರ್ ಅನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಎಂಕಾಂ ಇಲ್ಲವೇ ಎಂಬಿಎ ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 35 ವರ್ಷ ಮೀರಿರಬಾರದು. ಕನಿಷ್ಠ 2 ವರ್ಷಗಳ ಅನುಭವ ಹೊಂದಿರುವವರಿಗೆ ಮಾಸಿಕ ಮೂವತ್ತು ಸಾವಿರ ರೂ.ಗಳು ಮತ್ತು ಪ್ರಯಾಣ ಭತ್ಯೆಯನ್ನು ಸಂಭಾವನೆ ರೂಪದಲ್ಲಿ ನೀಡಲಾಗುವುದು.
ಅಭ್ಯರ್ಥಿಗಳ ಅನುಭವವನ್ನು ಆಧರಿಸಿ ಆಯ್ಕೆ ಮಾಡಲಾಗುವುದು. ಯಾವುದೇ ರೀತಿಯ ಸಂದರ್ಶನವಿರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆ ದಿನಾಂಕ. ಹೆಚ್ಚಿನ ಮಾಹಿತಿ ಮತ್ತು ಅರ್ಜಿಗಾಗಿ www. ramanagara.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು