Tel: 7676775624 | Mail: info@yellowandred.in

Language: EN KAN

    Follow us :


ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ

Posted date: 03 Sep, 2020

Powered by:     Yellow and Red

ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯ

ರಾಮನಗರ:ಸೆ/02/20/ಬುಧವಾರ. ಜಿಲ್ಲೆಯಲ್ಲಿ ಹೆಚ್ಚು ಅಂತರ್ಜಲ ಬಳಸುವ ತಾಲೂಕುಗಳೆಂದು ಗುರುತಿಸಲಾಗಿರುವ ರಾಮನಗರ ಮತ್ತು ಕನಕಪುರ ತಾಲೂಕುಗಳಲ್ಲಿ ಹೊಸದಾಗಿ ಕೊಳವೆ ಬಾವಿ ಇಲ್ಲವೇ ತೆರೆದ ಬಾವಿಗಳನ್ನು ಕೊರೆಯಿಸಲು ಅನುಮತಿ ಪಡೆದು ಕೊಳ್ಳುವುದನ್ನು ಸಣ್ಣನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಕಡ್ಡಾಯಗೊಳಿಸಿದೆ.


ಅಂತರ್ಜಲ ಸಂಪನ್ಮೂಲ ಮೌಲೀಕರಣದ ಅನುಸಾರ ಜಿಲ್ಲೆಯಲ್ಲಿ ರಾಮನಗರ ಮತ್ತು ಕನಕಪುರ ತಾಲೂಕುಗಳಲ್ಲಿ ಹೆಚ್ಚು ಅಂತರ್ಜಲದ ಬಳಕೆಯಾಗುತ್ತಿದೆ. ಹೀಗಾಗಿ ಈ ಎರಡೂ ತಾಲೂಕುಗಳಲ್ಲಿ ಹೊಸದಾಗಿ ಕೊಳವೆ ಬಾವಿ  ಇಲ್ಲವೇ ತೆರೆದ ಬಾವಿಗಳನ್ನು ಕೊರೆಸಲು ರಾಮನಗರ ಜಿಲ್ಲಾ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳುವುದು ಕಡ್ಡಾಯವಾಗಿದೆ.


*ನೋಂದಣಿ:* ಈಗಾಗಲೇ ರಾಮನಗರ ಮತ್ತು ಕನಕಪುರ ತಾಲೂಕುಗಳಲ್ಲಿ ಕೊಳವೆ ಇಲ್ಲವೇ ತೆರೆದ ಬಾವಿಗಳನ್ನು ಹೊಂದಿರುವವರು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಹಾಗೆಯೇ, ಹೊಸದಾಗಿ ಕೊಳವೆ ಬಾವಿ ಇಲ್ಲವೇ ತೆರೆದ ಬಾವಿಗಳನ್ನು ಕೊರೆಯಿಸಲು ಇಚ್ಚಿಸುವವರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಇಲ್ಲದೆ ಕೊರೆಯಿಸಿರುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಸಮಿತಿ ತಿಳಿಸಿದೆ.


*ಯಂತ್ರಗಳಿಗೂ ನೊಂದಣಿ:* ಕೊಳವೆ ಬಾವಿ ಕೊರೆಯುವ ಯಂತ್ರಗಳನ್ನು ಸಹ ಕರ್ನಾಟಕ ಅಂತರ್ಜಲ ಪ್ರಾಧಿಕಾರದಡಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಜಿಲ್ಲಾ ಅಂತರ್ಜಲ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ ರಿಗ್ ಯಂತ್ರಗಳನ್ನು ನೋಂದಾಯಿಸಿಕೊಳ್ಳಲು ಎಲ್ಲಾ ರಿಗ್ ಮಾಲೀಕರಿಗೆ ಸೂಚಿಸಿದೆ. ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳದೆ ಕೊಳವೆ ಬಾವಿ ಕೊರೆಯುತ್ತಿರುವ ಯಂತ್ರಗಳನ್ನು ನಿಯಮಗಳ ಪ್ರಕಾರ ಜಪ್ತಿ ಮಾಡಿ ಅಂತಹ ರಿಗ್ ಮಾಲೀಕರು ಮತ್ತು ಏಜೆನ್ಸಿಗಳ ಮೇಲೆ ಕೇಸ್ ದಾಖಲು ಮಾಡಲಾಗುವುದು ಎಂದು ಜಿಲ್ಲಾ ಅಂತರ್ಜಲ ಪ್ರಾಧಿಕಾರ ಸಮಿತಿ ತಿಳಿಸಿದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ, ಅಂತರ್ಜಲ ನಿರ್ದೇಶನಾಲಯ, ನಂ.102, 3ನೇ ಕ್ರಾಸ್, 1ನೇ ಬ್ಲಾಕ್, ಉತ್ತರ ಬಡಾವಣೆ, 1ನೇ ಫೇಸ್, ರತ್ನಾಕರ ಬ್ಯಾಂಕ್ ಪಕ್ಕ, ಬಿ.ಎಂ.ರಸ್ತೆ, ಎರಡನೇ ಮಹಡಿ, (ರಾಯಲ್‌ಎನ್‌ಫೀಲ್ಡ್ ಶೋರೂಂ ಮೇಲ್ಭಾಗದಲ್ಲಿ), ರಾಮನಗರ-562159. ಕಚೇರಿ ದೂ. ಸಂಖ್ಯೆ 080-27273397 ಅಥವಾ ಇಮೇಲ್ ವಿಳಾಸ sgಜgತಿಡಿಚಿmಟಿಚಿgಚಿಡಿ@gmಚಿiಟ.ಛಿom ಇವರನ್ನು ಸಂಪರ್ಕಿಸಬಹುದಾಗಿದೆ.


 ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಭೂವಿಜ್ಞಾನಿ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑