Tel: 7676775624 | Mail: info@yellowandred.in

Language: EN KAN

    Follow us :


ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ವಯಸ್ಕರ ಶಿಕ್ಷಣಾಧಿಕಾರಿ ಬಸವರಾಜು ಪಣ

Posted date: 08 Sep, 2020

Powered by:     Yellow and Red

ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ವಯಸ್ಕರ ಶಿಕ್ಷಣಾಧಿಕಾರಿ ಬಸವರಾಜು ಪಣ

ರಾಮನಗರ:ಸೆ/08/20/ಮಂಗಳವಾರ. ಜಿಲ್ಲೆಯಲ್ಲಿ ಶಿಕ್ಷಣದಿಂದ ವಂಚಿತರಾಗಿರುವ 15 ರಿಂದ 30 ವರ್ಷದೊಳಗಿನವರಿಗೆ ಶಿಕ್ಷಣ ನೀಡಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಲಾಗಿದೆ ಎಂದು ವಯಸ್ಕರ ಶಿಕ್ಷಣಾಧಿಕಾರಿ ಬಸವರಾಜು ಅವರು ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ರಾಮನಗರದ ವಯಸ್ಕರ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತಿಯಲ್ಲಿ ನಡೆದ 54 ನೇ ಅಂತರರಾಷ್ಟ್ರೀಯ  ಸಾಕ್ಷರತಾ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಗ್ರಾಮೀಣ ಭಾಗದಲ್ಲಿ ಸಾಕ್ಷರತಾ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಸಾಕ್ಷರತಾ ಗ್ರಾಮಗಳನ್ನಾಗಿಸಿ ಸದೃಢ ಸಮಾಜ ಮತ್ತು ದೇಶವನ್ನು ಕಟ್ಟುವ ಅಗತ್ಯವನ್ನು ಅವರು ವಿವರಿಸಿದರು.


*ಪ್ರಮಾಣ ವಚನ:* ಅನಕ್ಷರಸ್ಥರೆಲ್ಲರೂ ಅಕ್ಷರ ಕಲಿತು ಸಾಕ್ಷರಸ್ಥರಾಗಿ ಕೌಶಲ್ಯಾಭಿವೃದ್ಧಿ ಹೊಂದಲು ಹಾಗೂ ಸದೃಢ ಸಮಾಜದ ನಿರ್ಮಾಣಕ್ಕಾಗಿ ಅಕ್ಷರ ಕಲಿತ ಋಣವನ್ನು ಇನ್ನೊಬ್ಬರಿಗೆ ಕಲಿಸಿಕೊಡುವ ಮೂಲಕ ತೀರಿಸುತ್ತೇನೆಂದು ಸಭೆಯಲ್ಲಿ ಭಾಗವಹಿಸಿದ್ದವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿದೇರ್ಶಕರು ಪ್ರಮಾಣ ವಚನ ಬೋಧಿಸಿದರು.


ಸಾಕ್ಷರತಾ ಕಾರ್ಯಕ್ರಮಗಳ ಮೂಲಕ ಕರ್ನಾಟಕವನ್ನು ಸಾಕ್ಷರ ಸಮೃದ್ಧ, ಸುಸ್ಥಿರ ಮತ್ತು ಅಭಿವೃದ್ಧಿ ನಾಡನ್ನಾಗಿಸುವ ಉದ್ದೇಶವನ್ನು ಹೊಂದಲಾಗಿದೆ. ಇದಕ್ಕಾಗಿ ಗ್ರಾಮೀಣ ಪ್ರದೇಶದ ಪ್ರತಿ ಮನೆಯನ್ನು ತಲುಪಿ ಶಿಕ್ಷಣದಿಂದ ವಂಚಿತರಾದವರಿಗೆ ಕಲಿಸಿಕೊಡಲು ಜನಾಂದೋಲನದ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಉಷಾರವಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಕ್ರಂ ಉಲ್ಲಾ ಷರೀಫ್, ಸಾಮಾಜಿಕ ನ್ಯಾಯ ಸಮತಿ ಅಧ್ಯಕ್ಷ ಭಾಗ್ಯ, ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷೆ ಸುಗುಣ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑