Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ: ಇಂದು 46 ಪ್ರಕರಣ ದೃಢ

Posted date: 20 Sep, 2020

Powered by:     Yellow and Red

ಕೊರೊನಾ: ಇಂದು 46 ಪ್ರಕರಣ ದೃಢ

ರಾಮನಗರ:ಸೆ/20/20/ಭಾನುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 10, ಕನಕಪುರ 6, ಮಾಗಡಿ 4 ಮತ್ತು ರಾಮನಗರ 26 ಪ್ರಕರಣಗಳು ಸೇರಿ ಇಂದು ಒಟ್ಟು 46 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.


 *ಒಟ್ಟು ಪ್ರಕರಣ:* ಇದುವರೆಗೆ ಜಿಲ್ಲೆಯಲ್ಲಿ 5,036 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1,215, ಕನಕಪುರ 1,011, ಮಾಗಡಿ 772 ಮತ್ತು ರಾಮನಗರ 2,038 ಪ್ರಕರಣಗಳು ಸೇರಿವೆ.


*ಸಾವು:* ಜಿಲ್ಲೆಯಲ್ಲಿ ಇದುವರೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ 12, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 15 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 15 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 53 ಮಂದಿ ನಿಧನರಾಗಿದ್ದಾರೆ.


 *ಗುಣಮುಖ:* ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 18, ಕನಕಪುರ ತಾಲ್ಲೂಕಿನಲ್ಲಿ 11, ಮಾಗಡಿ ತಾಲ್ಲೂಕಿನಲ್ಲಿ 7 ಹಾಗೂ ರಾಮನಗರ ತಾಲ್ಲೂಕಿನಲ್ಲಿ 23 ಜನ ಸೇರಿ ಒಟ್ಟಾರೆ 59 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,135 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 1,002, ಕನಕಪುರ 825, ಮಾಗಡಿ 577 ಮತ್ತು ರಾಮನಗರ 1,731 ಜನರು ಸೇರಿದ್ದಾರೆ.


 *ಸಕ್ರಿಯ ಪ್ರಕರಣ:* ಜಿಲ್ಲೆಯಲ್ಲಿ ದಾಖಲಾಗಿರುವ 5,036 ಪ್ರಕರಣಗಳ ಪೈಕಿ 4,135 ಜನರು ಗುಣಮುಖರಾಗಿದ್ದಾರೆ, ಇನ್ನೂ 848 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು 848 ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 201, ಕನಕಪುರ 175, ಮಾಗಡಿ 180 ಮತ್ತು ರಾಮನಗರ 292 ಪ್ರಕರಣಗಳು ಸೇರಿವೆ.


 *ಜಿಲ್ಲಾ ಆರೋಗ್ಯ ಇಲಾಖೆ ವರದಿ:* ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಭಾನುವಾರ (ಸೆ. 20) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 42,624 (ಹೊಸದಾಗಿ ಇಂದಿನ 511 ಸೇರಿ).


 *ಜ್ವರ ತಪಾಸಣೆ:* ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 87 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 7,428 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.


 *ಮಾದರಿ ಸಂಗ್ರಹ:* ಇಂದು ಹೊಸದಾಗಿ 511 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 42,883 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 37,578 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 216 ಬಾಕಿ ವರದಿ ಸೇರಿ ಒಟ್ಟು 216 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑