Tel: 7676775624 | Mail: info@yellowandred.in

Language: EN KAN

    Follow us :


ಸ್ವಾತಂತ್ರ್ಯ ಹಾಗೂ ಐಕ್ಯತೆ ಸಂರಕ್ಷಣೆಗಾಗಿ ಶ್ರದ್ಧಾಪೂರ್ವಕವಾಗಿ ಕೆಲಸ ಮಾಡಬೇಕು. ನ್ಯಾ ಯರಮಾಳ್ ಕಲ್ಪನಾ

Posted date: 19 Nov, 2020

Powered by:     Yellow and Red

ಸ್ವಾತಂತ್ರ್ಯ ಹಾಗೂ ಐಕ್ಯತೆ ಸಂರಕ್ಷಣೆಗಾಗಿ ಶ್ರದ್ಧಾಪೂರ್ವಕವಾಗಿ ಕೆಲಸ ಮಾಡಬೇಕು. ನ್ಯಾ ಯರಮಾಳ್ ಕಲ್ಪನಾ

ಚನ್ನಪಟ್ಟಣ:ನ/18/20/ಗುರುವಾರ.


ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ !ಮನೋಭಾವದಿಂದ ಕೆಲಸ ಮಾಡಬೇಕು. ಆಗಲೇ ಸಮಾಜದಲ್ಲಿನ ಅಸಾಮಾನತೆಯನ್ನು ಹೋಗಲಾಡಿಸಿ, ಸಮಾನತೆಯನ್ನು ಸೃಷ್ಟಿಸಲು ಸಾಧ್ಯ ಎಂದು ಹಿರಿಯ ಸಿವಿಲ್ ಹಾಗೂ ಜೆ ಎಂ ಎಫ್ ಸಿ ನ್ಯಾಯಾಧೀಶೆ ಯರಮಾಳ್ ಕಲ್ಪನಾ ರವರು ತಿಳಿಸಿದರು.

ಅವರು ಇಂದು ನ್ಯಾಯಾಲಯದ ಸಮುಚ್ಚಯಗಳ ಮುಂದೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಸ್ವೀಕಾರ ಮಾಡಿ ಮಾತನಾಡಿದರು.


ದೇಶದ ಪ್ರತಿಯೊಬ್ಬ ನಾಗರೀಕನೂ ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ, ಅಥವಾ ಇನ್ನಿತರ ರಾಜಕೀಯ ಹಾಗೂ ಆರ್ಥಿಕ ಕುಂದುಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು, ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಪ್ರಯತ್ನ ಪಟ್ಟರೆ ದೇಶವೂ ಸುಧಾರಿಸುತ್ತದೆ ಎಂದರು.


ಪ್ರಧಾನ ಸಿವಿಲ್ ಹಾಗೂ ಜೆ ಎಂ ಎಫ್ ಸಿ ನ್ಯಾಯಾಧೀಶ ಎಂ ಮಹೇಂದ್ರ ರವರು ಪ್ರಮ ಪ್ರಮಾಣ ವಚನ ಬೋಧಿಸಿದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ ವಿ ಗಿರೀಶ್, ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು ಮತ್ತು ಸಿಬ್ಬಂದಿಗಳು ಪ್ರಮಾಣ ವಚನ ಸ್ವೀಕರಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑