Tel: 7676775624 | Mail: info@yellowandred.in

Language: EN KAN

    Follow us :


ಅಕ್ರಮ ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿ ಸಿ ಪಾಟೀಲ್

Posted date: 02 Jan, 2021

Powered by:     Yellow and Red

ಅಕ್ರಮ ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿ ಸಿ ಪಾಟೀಲ್

ರಾಮನಗರ:ಜ/01/21/ಶುಕ್ರವಾರ. ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದರೆ ದಂಡ, ಓವರ್ ಲೋಡ್ ಹಾಕಿದರೆ ದಂಡ ಹಾಗೂ ದಿನದ ಇಪ್ಪತ್ನಾಲ್ಕು ಗಂಟೆಯು ಚೆಕ್ ಪೋಸ್ಟ್ ನಿರ್ವಹಣೆ ಮಾಡಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ್ ಅವರು ಇಂದು ತಿಳಿಸಿದರು. ಅವರು ಇಂದು ಬಿಡದಿಯ ಹುರಗಾನಹಳ್ಳಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.


ಪರಿಶೀಲನೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಗೆ ಮಾತನಾಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣಿಗಾರಿಕೆ ಹಾಗೂ ಕ್ರಷರ್ ಗಳ ಬಗ್ಗೆ ಸಭೆ ನಡೆಸಿ  ಪರಿಶೀಲನೆ ನಡೆಸಲಾಗುವುದು. ಅಕ್ರಮ ಗಣಿಗಾರಿಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಲಾಗುವುದು ಎಂದರು.


ಗಣಿಗಾರಿಕೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ರಸ್ತೆಯನ್ನು ಡಿ.ಎಂ.ಎ ಫಂಡ್ ಮೂಲಕ ಅಭಿವೃದ್ಧಿಗೊಳಿಸಲಾಗುವುದು. ಜಿಲ್ಲೆಯ ಗಣಿಗಾರಿಕೆ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೂಗೊಳ್ಳಲಾಗುವುದು ಎಂದರು.


ಗಣಿಗಾರಿಕೆ ವಸ್ತುಗಳ ಓವರ್ ಲೋಡಿಂಗ್ ಪರಿಶೀಲಿಸಲು ಚೆಕ್ ಪೋಸ್ಟ್‌ ಗಳನ್ನು ಬಲವರ್ಧನೆಗೊಳಿಸಲಾಗುವುದು. ಹೆಗ್ಗಡಳ್ಳಿ ಬಳಿ ಇರುವ ಚೆಕ್ ಪೋಸ್ಟ್‌ ಇನ್ನೂ ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑