Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್-19 ಲಸಿಕಾಕರಣದ ಡ್ರೈರನ್ ಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ

Posted date: 08 Jan, 2021

Powered by:     Yellow and Red

ಕೋವಿಡ್-19 ಲಸಿಕಾಕರಣದ ಡ್ರೈರನ್ ಗೆ  ಚಾಲನೆ ನೀಡಿದ ಉಪಮುಖ್ಯಮಂತ್ರಿ

ರಾಮನಗರ:ಜ/08/21/ಶುಕ್ರವಾರ. ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಆದ ಡಾ: ಅಶ್ವಥ್ ನಾರಾಯಣ ಸಿ.ಎನ್ ಅವರು ಇಂದು  ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕಾಕರಣದ ಡ್ರೈರನ್  ಕಾರ್ಯಕ್ರಮಕ್ಕೆ ಇಂದು ಚಾಲನೆ  ನೀಡಿದರು.


ಲಸಿಕೆ ನೀಡಲು ಸ್ಥಾಪಿಸಲಾಗಿರುವ, ಪ್ರವೇಶ ಕೊಠಡಿ,  ನೋಂದಣಿ ದೃಢೀಕರಿಸುವ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮ ‌ಪ್ರತಿನಿಧಿಗಳೊಂದಿಗೆ ಮಾತನಾಡಿ ಇನ್ನೂ ಒಂದು ವಾರದಲ್ಲಿ ಲಸಿಕೆ ಲಭ್ಯವಾಗಲಿದ್ದು, ಲಸಿಕೆ ನೀಡಲು ಜಿಲ್ಲೆಯಲ್ಲಿ ಲಸಿಕೆಯ ಸಂಗ್ರಹ, ಸಾಗಣೆ, ಡಿ-ಫ್ರೀಜ್ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.


ಲಸಿಕೆಯನ್ನು ಜಿಲ್ಲೆಯಲ್ಲಿ ಎಲ್ಲರಿಗೂ ನೀಡಲು ನಾಲ್ಕು ಹಂತದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಸರ್ಕಾರಿ ಹಾಗೂ ಖಾಸಗಿ ಐ.ಸಿ.ಡಿ.ಎಸ್ ನ 8,405 ಜನರಿಗೆ ಲಸಿಕೆ‌ ನೀಡಲಾಗುವುದು. ಇದಕ್ಕಾಗಿ 87 ಕೇಂದ್ರಗಳನ್ನು  ಸಿದ್ದ ಮಾಡಿಕೊಳ್ಳಲಾಗಿದೆ. ಮೊದಲ ಡೋಸ್ ಲಸಿಕೆ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುವುದು ಎಂದರು.


ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ ಪದ್ಮಾ ಅವರು ಜಿಲ್ಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಆರೋಗ್ಯ ಕೇಂದ್ರಗಳು ಸೇರಿ ಒಟ್ಟು 8 ಕಡೆ ಕೋವಿಡ್ ಲಸಿಕೆ ಡ್ರೈ ರನ್ ಮಾಡಲಾಗುತ್ತಿದೆ. ಎರಡನೇ ಫೇಸ್ ನಲ್ಲಿ ಫ್ರಂಟ್ ಲೈನ್ ವರ್ಕರ್  ಹಾಗೂ ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಹಾಗೂ ಕೋ ಮಾರ್ಬಿಡಿಟಿ ಇರುವವರಿಗೆ  ಲಸಿಕೆ ನೀಡಲಾಗುವುದು.

ಎರಡನೇ ಹಂತದಲ್ಲಿ 395 ಬೂತ್ ಹಾಗೂ 563 ಲಸಿಕೆ  ನೀಡುವ ವ್ಯಾಕ್ಸಿನೇಟರ್ ಗಳನ್ನು ಗುರುತಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್ .ಅರ್ಚನಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ ನಿರಂಜನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ್...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑