Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಗೆ ಆಗಮಿಸಿದ ಕೊರೋನಾ ಲಸಿಕೆ ಹರ್ಷ ವ್ಯಕ್ತಪಡಿಸಿದ ಜಿಲ್ಲಾಡಳಿತ

Posted date: 16 Jan, 2021

Powered by:     Yellow and Red

ರಾಮನಗರ ಜಿಲ್ಲೆಗೆ ಆಗಮಿಸಿದ ಕೊರೋನಾ ಲಸಿಕೆ ಹರ್ಷ ವ್ಯಕ್ತಪಡಿಸಿದ ಜಿಲ್ಲಾಡಳಿತ

ರಾಮನಗರ:ಜ/15/21/ಶುಕ್ರವಾರ. ರಾಮನಗರ ಜಿಲ್ಲೆಗೆ ಶುಕ್ರವಾರ  ಬೆಳಿಗ್ಗೆ ಬಂದ 5000 ಕೊರೋನಾ ಲಸಿಕೆ ಬಂತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಲಸಿಕೆಯನ್ನು  ಸ್ವಾಗತಿಸಿ ಬರಮಾಡಿಕೊಂಡರು. 


 ಜಿಲ್ಲೆಯಲ್ಲಿ ಈಗಾಗಲೇ ಸುಮಾರು 8 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, 107 ಸೆಷನ್ ನಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ ತಲಾ 100 ಮಂದಿಗೆ ಲಸಿಕೆ ನೀಡಲಾಗುತ್ತದೆ. ಜಿಲ್ಲಾಸ್ಪತ್ರೆ, ರಾಮಕೃಷ್ಣ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆ, ಚನ್ನಪಟ್ಟಣ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ, ಕನಕಪುರ ಮೆಟರ್ ನಿಟಿ ಆಸ್ಪತ್ರೆ, ಮಾಗಡಿ ತಾಲ್ಲೂಕು ಆಸ್ಪತ್ರೆ, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುರುತಿಸಲಾಗಿದ್ದು, ಪ್ರತಿ ಕೇಂದ್ರಕ್ಕೆ 5 ವೆಕ್ಸಿನೇಟರ್ ಗಳನ್ನು ನೇಮಕ ಮಾಡಲಾಗಿದೆ.


ಜ16 ರಿಂದ ಲಸಿಕೆ ಕಾರ್ಯಕ್ಕೆ ಚಾಲನೆ ಸಿಗಲಿದೆ.  ರಾಮನಗರದಲ್ಲಿ ಇದುವರೆಗೆ 8405 ಮಂದಿಯನ್ನು ನೋಂದಣಿ ಮಾಡಿಕೊಂಡಿದ್ದು ಇದರಲ್ಲಿ  ರಾಮನಗರ ತಾಲ್ಲೂಕಿನಲ್ಲಿ- 3161,  ಚನ್ನಪಟ್ಟಣ- 1633, ಮಾಗಡಿ-1601, ಕನಕಪುರ -2010 ಮಂದಿಯನ್ನು ನೋಂದಣಿ ಮಾಡಿಕೊಳ್ಳಲಾಗಿದೆ.


ಲಸಿಕೆ ಇಳಿಸಿಕೊಳ್ಳುವ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑