Tel: 7676775624 | Mail: info@yellowandred.in

Language: EN KAN

    Follow us :


ಗುತ್ತಲೆಹುಣಸೆ ಗ್ರಾಮಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ

Posted date: 19 Jan, 2021

Powered by:     Yellow and Red

ಗುತ್ತಲೆಹುಣಸೆ ಗ್ರಾಮಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ

ರಾಮನಗರ:ಜ/18/21/ಸೋಮವಾರ. ವಸತಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಕನಕಪುರ ತಾಲ್ಲೂಕಿನ ಗುತ್ತಲಹುಣಸೆ ಗ್ರಾಮದಲ್ಲಿರುವ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಂತರ ದೇವಸ್ಥಾನದ ಹತ್ತಿರ ಇರುವ ಪಡಸಾಲೆಯಲ್ಲಿ ಕುಳಿತು ಗ್ರಾಮಸ್ಥರೊಂದಿಗೆ ಮಾತನಾಡಿದರು. ಗ್ರಾಮಸ್ಥರು ತಮ್ಮ ಊರಿನ ಬಳಿ ಇರುವ ಗಂಗಾಧರೇಶ್ವರ ದೇವಸ್ಥಾನಕ್ಕೆ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಿಕೊಡುವಂತೆ ಮನವಿ ಸಲ್ಲಿಸಿದರು.

ಸಚಿವರು ಜಿಲ್ಲಾಧಿಕಾರಿಗಳಿಗೇ ಕರೆ ಮಾಡಿ ಸಮಸ್ಯೆಯನ್ನು ಸರಿಪಡಿಸಲು ವ್ಯವಸ್ಥೆ ಮಾಡುವಂತೆ ತಿಳಿಸಿದರು.


ಸೂರಿಲ್ಲದೆ ಇರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿಗಳ ಮೂಲಕ ಮನವಿ ಕಳುಹಿಸಿಕೊಟ್ಟರೆ ಮನೆ ನಿರ್ಮಾಣಕ್ಕೆ 1,20,000/- ಸಹಾಯಧನ ನೀಡಲಾಗುವುದು ಎಂದರು.


ಸುಡಗಾಡು ಸಿದ್ದ, ಅಲೆಮಾರಿ, ಕಾಡು ಗೊಲ್ಲರೂ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ವಸತಿ ಒದಗಿಸಲು ಕ್ರಮ ಕೈಗೊಳ್ಳಲಾಗಲಾಗಿದೆ. ರಾಜ್ಯದಲ್ಲಿ ಅಂದಾಜು 69,000 ಜನರಿಗೆ ವಸತಿ ಒದಗಿಸಲಾಗಿದೆ. ಗ್ರಾಮ ಪಂಚಾಯಿತಿಯಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಶಾಸಕರು ತಮ್ಮ ವ್ಯಾಪ್ತಿಯ 35 ಜನರ ಹೆಸರನ್ನು ಒದಗಿಸುವಂತೆ ಕೋರಲಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸ ಕೂಡ ಗ್ರಾಮಸ್ಥರು ಮಾಡಬೇಕು. ಅರ್ಹರ ಹೆಸರನ್ನು ಒದಗಿಸಿದರೆ ಸೂರು ಒದಗಿಸಲಾಗುವುದು ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑