Tel: 7676775624 | Mail: info@yellowandred.in

Language: EN KAN

    Follow us :


ರಸ್ತೆ ಅಪಘಾತ ತಗ್ಗಿಸಲು ತಂಡ ರಚನೆ: ಜಿಲ್ಲಾ ಪೋಲೀಸ್ ಅಧೀಕ್ಷಕ ಗಿರೀಶ್

Posted date: 24 Feb, 2021

Powered by:     Yellow and Red

ರಸ್ತೆ ಅಪಘಾತ ತಗ್ಗಿಸಲು ತಂಡ ರಚನೆ: ಜಿಲ್ಲಾ ಪೋಲೀಸ್ ಅಧೀಕ್ಷಕ ಗಿರೀಶ್

ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕ‌ ಗಿರೀಶ್ ಅವರು ಪೊಲೀಸ್ ಠಾಣಾವಾರು ತಂಡ ರಚಿಸಿದ್ದಾರೆ.


ಅವರು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಾಕ್ಷತಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆಗಳಲ್ಲಿ ಇರುವ ಉಬ್ಬುಗಳು (ಹಂಪ್) ತಿರುವುಗಳು (ಕರ್ವ್) ವಾಹನ ಚಾಲಕರಿಗೆ ಗೋಚರವಾಗುವುದಿಲ್ಲ.  ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿಯಾಗಿ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಅಪಘಾತಗಳನ್ನು ತಡೆಯಬಹುದು ಎಂದರು.


ರಸ್ತೆ ಅಪಘಾತ ತಡೆಗಟ್ಟಲು ರಚಿಸಲಾಗಿರುವ ತಂಡದಲ್ಲಿ ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಅವಶ್ಯಕವಿದ್ದ ಕಡೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಇರುತ್ತಾರೆ. ತಂಡವು ವಾರಕೊಮ್ಮೆ ಸಭೆ ನಡೆಸಬೇಕು. ಉಪ ಪೊಲೀಸ್ ಅಧೀಕ್ಷಕರು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಜೊತೆ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ರಸ್ತೆ ಅಪಘಾತದಲ್ಲಿ ಮೃತ ಪಡುವ ಪ್ರಕರಣಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುತ್ತದೆ. ಇಲಾಖೆ ಅವರು ಮುಂಜಾಗ್ರತಾ ಕ್ರಮಗಳನ್ನು ಏಕೆ ವಹಿಸಲಿಲ್ಲ ಎಂದು ಪ್ರಶ್ನಿಸುತ್ತದೆ ಎಂದರು.


ಇಲಾಖೆಗಳಿಂದ ರಸ್ತೆ ಕಾಮಗಾರಿಗಳು ನಡೆಯುತ್ತಿರುತ್ತವೆ. ಕಾಮಗಾರಿ ನಡೆಯುವ ರಸ್ತೆಗಳಿಗೆ ಬ್ಯಾರಿಕೇಡಿಂಗ್, ಸೂಚನಾ ಪಲಕ ಅಳವಡಿಕೆ ಹಾಗೂ ಪರ್ಯಾಯ ರಸ್ತೆ ವ್ಯವಸ್ಥೆ ಮಾಡುವಾಗ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ. ಇಲಾಖೆಗಳ ಸಮನ್ವಯ ಮುಖ್ಯ ಎಂದರು.


ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು, ವಾಹನ‌ ನಿಲುಗಡೆ ಇಲ್ಲದ ಪ್ರದೇಶಗಳಲ್ಲಿ ವಾಹನ ನಿಲುಗಡೆ ಮಾಡುವುದು, ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡುವುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.


ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ತಳ್ಳುವ ಗಾಡಿಯಲ್ಲಿ ಹೋಟೆಲ್‌ ನಡೆಸುತ್ತಿದ್ದಾರೆ. ಸಾರ್ವಜನಿಕರು ಆಹಾರ ಸೇವನೆ ಮಾಡಲು ರಸ್ತೆಯಲ್ಲೇ ವಾಹನ ನಿಲುಗಡೆ ಮಾಡುತ್ತಾರೆ.ಜನಸಂದಣಿ ಉಂಟು ಮಾಡುತ್ತಾರೆ. ಇದರಿಂದ ವಾಹನ ಚಾಲನೆಗೆ ತೊಂದರೆಯಾಗಿ ಅಪಘಾತ ಉಂಟಾಗುವ ಸಂಭವವಿರುತ್ತದೆ. ಇವುಗಳನ್ನು ಪರಿಶೀಲಿಸಿ ತೆರವುಗೊಳಿಸಿ ಎಂದರು.


ಸಭೆಯಲ್ಲಿ ಉಪ ಪೊಲೀಸ್ ಅಧೀಕ್ಷಕ ಕೆ ಎನ್ ರಮೇಶ್, ಮೋಹನ್ ಕುಮಾರ್, ಓಂ ಪ್ರಕಾಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವಿಜಯ್ ಗೋಪಾಲ್,  ಗಂಗಾಧರಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑