Tel: 7676775624 | Mail: info@yellowandred.in

Language: EN KAN

    Follow us :


ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್

Posted date: 03 Mar, 2021

Powered by:     Yellow and Red

ಮನೆ ಇಲ್ಲದ ಅಲೆಮಾರಿ ಜನಾಂಗದವರನ್ನು  ಗುರುತಿಸಿ: ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್

ಜಿಲ್ಲೆಯಲ್ಲಿ ಮನೆಯಿಲ್ಲದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೂರು ಒದಗಿಸಲು  ಅರ್ಹ ಫಲಾನುಭವಿಗಳನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಪಟ್ಟಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು. 


ಅವರು ಇಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ  ಸೌಲಭ್ಯ ಕಲ್ಪಿಸುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅರೆ ಅಲೆಮಾರಿ ಹಾಗೂ  ಅಲೆಮಾರಿ ಜನಾಂಗದವರಿಗೆ ಮನೆ‌ ಒದಗಿಸಲು ಗುರಿ‌ ನಿಗಧಿಯಾಗಿರುವುದಿಲ್ಲ. ನಿವೇಶನ ಹೊಂದಿರುವ ಅಹ೯ ಫಲಾನುಭವಿಗಳ ಪಟ್ಟಿಯನ್ನು ಸಿದ್ದ ಪಡಿಸಿ ಕೇಂದ್ರ ಕಛೇರಿಗೆ ಗುರಿ ನಿಗದಿ ಪಡಿಸಿಕೊಡುವಂತೆ ಪ್ರಸ್ತಾವನೆ ಸಲ್ಲಿಸಿ. ನಿವೇಶನ ಹಾಗೂ ಮನೆ ಇಲ್ಲದ ಫಲಾನುಭವಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿಕೊಳ್ಳಿ ಎಂದರು.


ಅಲೆಮಾರಿ ಅಥವಾ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಒಬ್ಬರು  ಜಿಲ್ಲಾಪಂಚಾಯತ್ ಸದಸ್ಯರು ಹಾಗೂ ಒಬ್ಬರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಆಯ್ಕೆ ಮಾಡಬೇಕಿರುತ್ತದೆ.ಈ ಜನಾಂಗಗಕ್ಕೆ ಸೇರಿದ ಜಿಲ್ಲಾ ಪಂಚಾಯತ್ ಸದಸ್ಯರು ಇರುವುದಿಲ್ಲ. ಒಬ್ಬರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಆಯ್ಕೆ ಮಾಡಬೇಕಿರುತ್ತದೆ. ಸರ್ಕಾರ ವಿಧಿಸಿರುವ ಷರತ್ತುಗಳೊಂದಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಅರ್ಹ ಸದಸ್ಯರನ್ನು ಆಯ್ಕೆಮಾಡುವಂತೆ ತಿಳಿಸಿದರು.


ಅರೆ ಅಲೆಮಾರಿ ಹಾಗೂ ಅಲೆಮಾರಿ ಜನಾಂಗದವರಿಗೆ ಸರ್ಕಾರದ ಯೋಜನೆಗಳು ತಲುಪಿರುವ ಬಗ್ಗೆ ಪರಿಶೀಲಿಸುವುದು ಸಮಿತಿಯ ಮುಖ್ಯ ಉದ್ದೇಶವಾಗಿರುತ್ತದೆ. ಸರ್ಕಾರ ನಿಗದಿಪಡಿಸುವ ಅವಧಿಗೆ ಕಾಲ ಕಾಲಕ್ಕೆ ಸರಿಯಾಗಿ ತಾಲ್ಲೂಕು‌ ಹಾಗೂ  ಜಿಲ್ಲಾ ಮಟ್ಟದಲ್ಲಿ ಸಭೆ ಆಯೋಜಿಸುವಂತೆ ತಿಳಿಸಿದರು.


ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಗಕ್ಕೆ ಸೇರಿದ ಗೊಲ್ಲರು ಹಾಗೂ ದೊಂಬಿದಾಸ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.  ಮಹಿಳೆಯರನ್ನು ಋತು ಚಕ್ರ ಅವಧಿಯಲ್ಲಿ ಊರಿನಿಂದ ಹೊರಗಿಡುವುದು ಹಾಗೂ ಇನ್ನೂ ಮುಂತಾದ ಮೂಢ ನಂಬಿಕೆಗಳ ಆಚರಣೆಗಳಿದ್ದಲ್ಲಿ   ಜಾಗೃತಿ ಕಾರ್ಯಕ್ರಮ ವನ್ನು ಆಯೋಜಿಸಿ ಅವುಗಳನ್ನು ದೂರ ಮಾಡಬೇಕು. ಈ ಜನಾಂಗದಲ್ಲಿ ಇರುವ ವಿದ್ಯಾವಂತ ವ್ಯಕ್ತಿಗಳನ್ನು ಗುರುತಿಸಿ ಜಾಗೃತಿ ಕಾರ್ಯಕ್ರಮ ದಲ್ಲಿ ಅವರು ಪಾಲ್ಗೊಳ್ಳುವಂತೆ ಮಾಡಿ ಎಂದರು.


ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ, ಸ್ನಾತಕೋತ್ತರ ವಿಭಾಗದಲ್ಲಿ ನೀಡುವ ವಿಧ್ಯಾರ್ಥಿ ವೇತನದ ಬಗ್ಗೆ ಪರಿಶೀಲಿಸಿದರು. ಸದರಿ ಸಾಲಿನಲ್ಲಿ 740 ವಿಧ್ಯಾರ್ಥಿಗಳಿಗೆ 14 ಲಕ್ಷದ 80 ಸಾವಿರ  ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. ಮೆಟ್ರಿಕ್ ನಂತರ, ಸ್ನಾತಕೋತ್ತರ ವಿಭಾಗದ ವಿಧ್ಯಾರ್ಥಿ ವೇತನ ಪಾವತಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಹಿಂದುಳಿದ ವಗ೯ಗಳ ಕಲ್ಯಾಣಾಧಿಕಾರಿ ಪಿ.ಬಿ.ಬಸವರಾಜು ಅವರು ಸಭೆಗೆ ಮಾಹಿತಿ ‌ನೀಡಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಉಮೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮನ್ ಸಿ.ವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑