Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ಲಸಿಕಾ ಕೇಂದ್ರಗಳಿಗೆ ಸಿ.ಇ. ಓ ಭೇಟಿ ಪರಿಶೀಲನೆ

Posted date: 17 Mar, 2021

Powered by:     Yellow and Red

ಕೋವಿಡ್ ಲಸಿಕಾ ಕೇಂದ್ರಗಳಿಗೆ ಸಿ.ಇ. ಓ ಭೇಟಿ ಪರಿಶೀಲನೆ

ಮೂರನೇ ಹಂತದ ಕೋವಿಡ್-19  ಲಸಿಕೆ ನೀಡುವ ಕಾರ್ಯ ಜಿಲ್ಲೆಯಲ್ಲಿ  ನಡೆದಿದ್ದು,  ಮಾಗಡಿ ತಾಲ್ಲೂಕು ಆಸ್ಪತ್ರೆ, ಹಂಚಿಕುಪ್ಪೆ ಹಾಗೂ ಅಜ್ಜನಹಳ್ಳಿ ಆರೋಗ್ಯ ಕೇಂದ್ರದ  ಕೋವಿಡ್ ಲಸಿಕಾ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ಭೇಟಿ ನೀಡಿ ಪರಿಶೀಲಿಸಿದರು.


ಆಸ್ಪತ್ರೆಯಲ್ಲಿರುವ ಕೋವಿಡ್ ಲಸಿಕೆ ನೀಡುವ ಕೇಂದ್ರದಲ್ಲಿ ನೊಂದಣಿ ಪ್ರಕ್ರಿಯೆ ಹಾಗೂ ಲಸಿಕೆ ನೀಡುತ್ತಿರುವ ಕುರಿತು ಪರಿಶೀಲನೆ ನಡೆಸಿದರು.


ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರೂ ಸಹ ಕೊರೊನಾ ಲಸಿಕೆಯನ್ನು ಪಡೆದುಕೊಳ್ಳಬಹುದು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯಲು ಪ್ರತಿ ಡೋಸಿಗೆ 250 ರೂ. ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ಲಸಿಕೆ ಪಡೆದುಕೊಂಡು ತೆರಳುತ್ತಿದ್ದ ವೃದ್ಧ ರನ್ನು ಮಾತನಾಡಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.


ಮಾಗಡಿ ತಾಲ್ಲೂಕು ಕಚೇರಿಯಲ್ಲಿ ಸಭೆ ನಡೆಸಿ  

 ಲಸಿಕೆ ಪಡೆಯಲು ಜನರು ಬಂದಾಗ ವಯಸ್ಸಿನ ಹಾಗೂ ಅಗತ್ಯ  ದಾಖಲೆ ಪಡೆದು ನೊಂದಣಿ ಮಾಡಿಕೊಳ್ಳತಕ್ಕದ್ದು, ಇದಕ್ಕಾಗಿ ಅಗತ್ಯ ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.


ಇದೇ ವೇಳೆ ಅವರು ಸಹ ಎರಡನೇ ಹಂತದ ಲಸಿಕೆಯನ್ನು ಪಡೆದುಕೊಂಡರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑