Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕೆಲಸಗಳಿಗೆ ಮೊದಲ ಆದ್ಯತೆ ನೀಡಬೇಕು: ಡಾ ರಾಕೇಶ್ ಕುಮಾರ್

Posted date: 18 Apr, 2021

Powered by:     Yellow and Red

ತಾಲ್ಲೂಕು ಆಡಳಿತ ಕೋವಿಡ್ ನಿಯಂತ್ರಣ ಕೆಲಸಗಳಿಗೆ ಮೊದಲ ಆದ್ಯತೆ ನೀಡಬೇಕು: ಡಾ ರಾಕೇಶ್ ಕುಮಾರ್

ಕೋವಿಡ್‌ ನಿಯಂತ್ರಿಸುವ ಕೆಲಸಗಳಿಗೆ  ತಾಲ್ಲೂಕು ಆಡಳಿತ ಮೊದಲ ಆದ್ಯತೆ ನೀಡಬೇಕು. ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಕೆಲಸವನ್ನು ಕ್ಷಿಪ್ರವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್. ಕೆ ಅವರು ತಿಳಿಸಿದರು.

ಅವರು ಶನಿವಾರ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿ ಮಾತನಾಡಿದರು.


*ಸೋಂಕು ಪರೀಕ್ಷೆ ಹೆಚ್ಚಿಗೆ ನಡೆಸಿ:*

ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಸೋಂಕು ಪರೀಕ್ಷೆಯನ್ನು ಹೆಚ್ಚಳಗೊಳಿಸಬೇಕು. ಸ್ವ್ಯಾಬ್ ಕಲೆಕ್ಟ್ ಮಾಡಲು ಸಿಬ್ಬಂದಿ ಕೊರತೆ ಇದ್ದಲ್ಲಿ ನಿಯಮಾವಳಿಗಳಂತೆ ನಿಯೋಜಿಸಿಕೊಳ್ಳಿ, ವಾಹನದ ವ್ಯವಸ್ಥೆ ಮಾಡಿಕೊಳ್ಳಿ. ಅನುದಾನದ ಕೊರತೆ ಇಲ್ಲ ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.


ಜನಸಂದಣಿ ಇರುವ ಪ್ರದೇಶಗಳಲ್ಲಿ

ಮೊಬೈಲ್ ಪರೀಕ್ಷಾ ಕೇಂದ್ರ ಆರಂಭಿಸಿ ಸ್ವ್ಯಾಬ್ ಸಂಗ್ರಹಿಸಿ. ಶೀಘ್ರ ಪತ್ತೆಯಿಂದ ರೋಗ ಹರಡುವುದನ್ನು ನಿಯಂತ್ರಿಸಬಹುದು ಎಂದರು.


ಖಾಸಗಿ ಆಸ್ಪತ್ರೆ/ ಕ್ಲಿನಿಕ್ ಅವರಿಗೆ ಸೂಚನೆ ನೀಡಿ ಐ.ಎಲ್. ಐ ಹಾಗೂ ಎಸ್.ಎ.ಆರ್.ಐ ಪ್ರಕರಣಗಳ ಪಟ್ಟಿ ಪಡೆದು ಪರೀಕ್ಷೆಗೆ ಒಳಪಡಿಸಿ. ಖಾಸಗಿ ಆಸ್ಪತ್ರೆ/ ಕ್ಲಿನಿಕ್ ಅವರು ಸಹಕರಿಸದಿದ್ದರೆ ನೋಟೀಸ್ ಜಾರಿ ಮಾಡಿ ಎಂದರು.


ಕೋವಿಡ್ ಸೋಂಕು ಪರೀಕ್ಷೆಯ ನಂತರ ವರದಿಯನ್ನು ಶೀಘ್ರವಾಗಿ ನೀಡಲು ವ್ಯವಸ್ಥೆ ಮಾಡಿಕೊಳ್ಳಿ.ಎರಡು ಪಾಳಿಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಿ, ಪರೀಕ್ಷಾ ವರದಿಯನ್ನು ಶೀಘ್ರವಾಗಿ ನೀಡಬಹುದು ಎಂದರು.


ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ ಟ್ರೇಸಿಂಗ್ ತಂಡಗಳನ್ನು ವಾಡ್೯ / ಗ್ರಾಮವಾರು   ನಿಯೋಜಿಸಿಕೊಂಡು ಕೋವಿಡ್  ಸೋಂಕಿತರ ಸಂಪರ್ಕಿತರ ಪತ್ತೆ ಕೆಲಸ ಚುರುಕುಗೊಳಿಸಿ. ಕೋವಿಡ್ ವಾರ್ ರೂಂ ನಲ್ಲಿ ಕ್ರಮಬದ್ಧವಾಗಿ ಉತ್ತಮ ರೀತಿಯಲ್ಲಿ ಕೆಲಸವಾಗಬೇಕು. ಪರಿಶೀಲನೆಯ ವೇಳೆ ಯಾವುದೇ ಲೋಪ ಇರಬಾರದು ಎಂದು ಎಚ್ಚರಿಕೆ  ನೀಡಿದರು. 


ಆರೋಗ್ಯ ಸಿಬ್ಬಂದಿಗಳು ಹಾಗೂ ಫ್ರಂಟ್ ಲೈನ್ ವರ್ಕಸ್೯ಗಳು ಎರಡನೇ ಡೋಸ್ ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅವರಿಗೆ ವಾರ್ ರೂಂ ಮೂಲಕ ಕರೆ ಮಾಡಿ ಲಸಿಕೆ  ಪಡೆದುಕೊಳ್ಳುವಂತೆ ತಿಳಿಸಿ ಅವರ ಆರೋಗ್ಯ ಅತ್ಯಂತ ಮುಖ್ಯ ಎಂದರು.


ಪಿ.ಹೆಚ್.ಸಿ ವಾರು ಕೋವಿಡ್ ಲಸಿಕೆ ಸಾಧನೆಯ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಕಡಿಮೆ ಸಾಧನೆಯಾಗಿರುವ ಪಿ.ಹೆಚ್.ಸಿಗಳಿಗೆ ಗ್ರಾಮದಲ್ಲಿ ಇಲಾಖೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸಿ ಜಾಗೃತಿ ಕಾರ್ಯಕ್ರಮಗಳ ನಂತರವು ಲಸಿಕೆ ಪಡೆಯುತ್ತಿಲ್ಲ ಎಂದು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. . ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು  45 ವರ್ಷ ಮೇಲ್ಪಟ್ಟ ವರು ಲಸಿಕೆ ಪಡೆಯುವಂತೆ ಪ್ರೇರೇಪಿಸಿ ಎಂದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮಾ, ಡಿ.ಎಸ್ ಒ ಡಾ ಕಿರಣ್ ಶಂಕರ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ , ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑