Tel: 7676775624 | Mail: info@yellowandred.in

Language: EN KAN

    Follow us :


1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ

Posted date: 20 Apr, 2021

Powered by:     Yellow and Red

1 ರಿಂದ 9 ನೇ ತರಗತಿ ವಿದ್ಯಾರ್ಥಿಗಳೆಲ್ಲರೂ ಪಾಸ್; ಜೂ.15 ರಿಂದ ಹೊಸ ಶೈಕ್ಷಣಿಕ ವರ್ಷ. ಶಿಕ್ಷಣ ಇಲಾಖೆ

ಬೆಂಗಳೂರು: 1 ರಿಂದ 9 ನೇ ತರಗತಿಯವರೆಗಿನ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಈ ಎಲ್ಲಾ ತರಗತಿಗಳ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಬೇಕು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ, ನಿಗದಿಯಂತೆ 10 ನೇ ತರಗತಿ ಪರೀಕ್ಷೆ ಜೂನ್ 21 ರಿಂದ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಇಂದು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.


ಕೋವಿಡ್ ಹಿನ್ನೆಲೆಯಲ್ಲಿ ಭೌತಿಕವಾಗಿ ಶಾಲೆಗಳು ಆರಂಭವಾಗದ ಹಿನ್ನೆಲೆಯಲ್ಲಿ ಒಂದ ರಿಂದ ಒಂಬತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈವರೆಗೆ ಆನ್​ಲೈನ್ ಮತ್ತು ವಿದ್ಯಾಗಮ ಯೋಜನೆ ಅಡಿ ನಡೆದ ಪಾಠಗಳಲ್ಲಿ ಅವರು ತೋರಿದ ಪ್ರಗತಿ ಇತ್ಯಾದಿ ಅಂಶಗಳೊಂದಿಗೆ ಚೈಲ್ಡ್ ಪ್ರೊಫೈಲ್ (ಕೃತಿ ಸಂಪುಟ) ತಯಾರಿಸಬೇಕು. ಸಿಸಿಇ ನಿಯಮಗಳಂತೆ ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆಗೆ ಪೂರೈಸಿದ ಪಠ್ಯವಸ್ತು ಅಥವಾ ಸಾಮರ್ಥ್ಯಗಳ ಸಾಧನೆ ಮತ್ತು ಕೊರತೆಗಳನ್ನು ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಿ ಎಲ್ಲಾ ವಿದ್ಯಾರ್ಥಿಗಳನ್ನ ಮುಂದಿನ ತರಗತಿಗೆ ಬಡ್ತಿ ನೀಡಬೇಕು. ಈ ಮಕ್ಕಳಿಗೆ ಪ್ರತ್ಯೇಕ ಮೌಲ್ಯಾಂಕನ . ಈ ಪ್ರಕ್ರಿಯೆಯನ್ನು ಏಪ್ರಿಲ್ 30 ರೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.


ಆರರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳು ವಿದ್ಯಾಗಮ ಕಾರ್ಯಕ್ರಮದಲ್ಲಿನ ದಾಖಲೆಗಳು ಮತ್ತು ಸಂವಹನದ ಆಧಾರದ ಮೇಲೆ, ಭೌತಿಕ ಹಾಗೂ ಆನ್‌ಲೈನ್ ಶಿಕ್ಷಣದ ಮೂಲಕ ತರಗತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಮತ್ತು ಮಕ್ಕಳಿಗೆ ನೀಡಿದ ಕಲಿಕಾ ಪೂರಕ ಚಟುವಟಿಕೆಗಳನ್ನು ಆಧರಿಸಿ ಸಂಗ್ರಹಿಸಿದ ದಾಖಲೆಗಳ ಕೃತಿಸಂಪುಟ (ಚೈಲ್ಡ್ ಪ್ರೊಫೈಲ್) ಮೇಲೆ ಮೌಲ್ಯಾಂಕನ ಮಾಡಬೇಕು. ಅವುಗಳ ದಾಖಲೆಯನ್ನಾಧರಿಸಿ ಪಡೆದ ಅಂಕಗಳನ್ನು 100 ಕ್ಕೆ ವೃದ್ಧಿಸಿ ಶ್ರೇಣಿಯನ್ನು ನಮೂದಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಈವರೆಗೆ ಪೂರೈಸಿರುವ ಪಠ್ಯವಸ್ತು ಮತ್ತು ಕಲಿಕಾ ಸಾಮಥ್ಯಗಳ ಮೂಲಕ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಿ ಮುಂದಿನ ತರಗತಿಗಳಿಗೆ ಬಡ್ತಿ ನೀಡಬೇಕು ಮತ್ತು ಪ್ರಗತಿ ಪತ್ರದಲ್ಲಿ ದಾಖಲಿಸಬೇಕು. ಈ ಪ್ರಕ್ರಿಯೆಯು ಏಪ್ರಿಲ್ 30 ರೊಳಗೆ ಪೂರ್ಣಗೊಳ್ಳಬೇಕು ಎಂದು ಹೇಳಿದೆ. 

ವಿದ್ಯಾರ್ಥಿಗಳ ಕಲಿಕೆಯಲ್ಲಿ ತೋರಿದ ಪ್ರಗತಿ ಮತ್ತು ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮ ನಡೆಸಿ ಈ ಕೊರತೆಯನ್ನು ತುಂಬಲು ಕ್ರಮವಹಿಸಬೇಕು. ಈ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದ ವೇಳೆ ನೈದಾನಿಕ ಪರೀಕ್ಷೆ ನಡೆಸಿ ಹಿಂದಿನ ವರ್ಷದ ಕಲಿಕೆಯ ಮಟ್ಟವನ್ನು ಗುರುತಿಸಬೇಕು. ನಂತರ ಸೇತು ಬಂಧ ಕಾರ್ಯಕ್ರಮದ ಮೂಲಕ ಆ ಕೊರತೆ ತುಂಬಿ ನಂತರ ಸಾಫಲ್ಯ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳಲ್ಲಿ ಕಲಿಕೆ ಆಗಿರುವುದನ್ನು ದೃಢೀಕರಿಸಿ ಮುಂದಿನ ತರಗತಿಯ ಬೋಧನೆ ಪ್ರಾರಂಭಿಸಬೇಕು ಎಂದು ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.


1 ರಿಂದ 7 ನೇ ತರಗತಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮೇ 1 ರಿಂದ ಜೂನ್ 14 ರವರೆಗೆ ಬೇಸಿಗೆ ರಜೆ ಎಂದು ಘೋಷಿಸಲಾಗಿದೆ. 

ಜೂನ್ 15 ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 

8 ಮತ್ತು 9 ನೇ ತರಗತಿ ಮಕ್ಕಳಿಗೆ ಮೇ 1 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ಇದೆ. ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ ಎಂದು ತಿಳಿಸಲಾಗಿದೆ.


ಪ್ರೌಢ ಶಾಲೆಗಳಲ್ಲಿನ ಶಿಕ್ಷಕರಿಗೆ ಜೂನ್ 15 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ಇರುತ್ತದೆ.

ಜೂನ್ 21 ರಿಂದ ಜುಲೈ 5 ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯುತ್ತವೆ.

ಆದರೆ, ಈ ವೇಳಾಪಟ್ಟಿ ಕೇವಲ ತಾತ್ಕಾಲಿಕವಾಗಿದ್ದು, ಕೋವಿಡ್ ಸೋಂಕಿನ ಸ್ಥಿತಿಗತಿ ಅನುಸಾರ ಬದಲಾಗುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑