Tel: 7676775624 | Mail: info@yellowandred.in

Language: EN KAN

    Follow us :


ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ

Posted date: 25 Apr, 2021

Powered by:     Yellow and Red

ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ

ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 2 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 2  ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲು ಆದೇಶಿಸಿದೆ. ಚುನಾವಣಾ ವೇಳೆ ಪಟ್ಟಿಯಂತೆ ಏಪ್ರಿಲ್ 27 (ಮಂಗಳವಾರ) ರಂದು ಮತದಾನ ನಡೆಯಲಿದೆ. 


ಸಾರ್ವತ್ರಿಕ ಚುನಾವಣೆ ನಡೆಯುವ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳು ಹಾಗೂ ಇತರೆ Establishment ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಏಪ್ರಿಲ್ 27 ರ ಮಂಗಳವಾರದಂದು ಕರ್ನಾಟಕ ಪೌರಸಭೆಗಳ  (ಕೌನ್ಸಿಲರ್ ಗಳ ಚುನಾವಣೆ) ನಿಯಮಗಳು 1977ರ ನಿಯಮ 64 ZD ಮತ್ತು ಕರ್ನಾಟಕ ಪೌರ ನಿಗಮಗಳ (ಚುನಾವಣೆ) ನಿಯಮಗಳು 1979 ರ ನಿಯಮ 70 XF ಗಳನ್ನು ಓದಿಕೊಂಡಂತೆ, ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ -135 ಬಿ ರಡಿಯಲ್ಲಿ ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ.


ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು, ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗುವುದು.


ಗೋ ರಾ ಶ್ರೀನಿವಾಸ...

ಮೊ:9845856139.


??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑