Tel: 7676775624 | Mail: info@yellowandred.in

Language: EN KAN

    Follow us :


ನಗರಸಭೆ ಚುನಾವಣೆ: ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಅವಕಾಶ

Posted date: 26 Apr, 2021

Powered by:     Yellow and Red

ನಗರಸಭೆ ಚುನಾವಣೆ: ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಅವಕಾಶ

ಚುನಾವಣಾ ಆಯೋಗವು ಹೊರಡಿಸಿರುವ ವೇಳಾಪಟ್ಟಿಯಂತೆ ರಾಮನಗರ ಹಾಗೂ ಚನ್ಬಪಟ್ಟಣ ನಗರಸಛೆಗೆ ಏಪ್ರಿಲ್ 27 ರಂದು ಮತದಾನವು ನಡೆಯಲಿದೆ. ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಸಮಯವನ್ನು ಕಲ್ಪಿಸಿದ್ದು, ಮತದಾನವು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.


ಮತದಾನ ಮುಕ್ತಾಯಕ್ಕೆ ಒಂದು ಗಂಟೆ ಮುಂಚಿತವಾಗಿ ಕೋವಿಡ್ ಸೋಂಕಿತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮತ ಚಲಾಯಿಸಲು ಅವಕಾಶ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸುವ ಸಂಬಂಧ ಕೋವಿಡ್ ಹಿನ್ನಲೆಯಲ್ಲಿ ಕೇಂದ್ರ ಗೃಹ ಮಂತ್ರಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಯನ್ವಯ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಚುನಾವಣೆ ನಡೆಸಲು ಆಯೋಗವು ಪ್ರತಿ ಮತಗಟ್ಟೆ ಕೇಂದ್ರಗಳಿಗೂ ಕೋವಿಡ್ ನಿಂದ ರಕ್ಷಣೆಗಾಗಿ ಸಾಮಗ್ರಿಗಳನ್ನು ಕಿಟ್ ರೂಪದಲ್ಲಿ ಒದಗಿಸಿರುತ್ತದೆ. 


ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸಂಬಂಧಪಟ್ಟ ಎಲ್ಲಾ ಚುನಾವಣಾಧಿಕಾರಿಗಳಿಗೂ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೂ, ಪೊಲೀಸ್, ಆರೋಗ್ಯ ಹಾಗೂ ಇತರೆ ಸಿಬ್ಬಂದಿಗಳಿಗೂ ಸೂಕ್ತ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑