Tel: 7676775624 | Mail: info@yellowandred.in

Language: EN KAN

    Follow us :


ಅಮೃತ ವಿಕಲಚೇತನ ಟ್ರಸ್ಟ್ ವತಿಯಿಂದ ವಿಕಲಚೇತನರಿಗೆ ದಿನಸಿ ಕಿಟ್ ವಿತರಣೆ

Posted date: 11 May, 2021

Powered by:     Yellow and Red

ಅಮೃತ ವಿಕಲಚೇತನ ಟ್ರಸ್ಟ್ ವತಿಯಿಂದ ವಿಕಲಚೇತನರಿಗೆ ದಿನಸಿ ಕಿಟ್ ವಿತರಣೆ

ರಾಮನಗರ : ತೀವ್ರತರ ಹರಡುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳು ಕೈ ಜೋಡಿಸಿ ಕಾರ್ಯನಿರ್ವಹಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಯೂತ್ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಎಸ್. ರುದ್ರೇಶ್ವರ ತಿಳಿಸಿದರು.

ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿನ ಅಮೃತ ವಿಕಲಚೇತನ ವೃದ್ಧಾಶ್ರಮದ ಆವರಣದಲ್ಲಿ ಅಮೃತ ವಿಕಲಚೇತನ ಟ್ರಸ್ಟ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಕಲಚೇತನರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರೊನಾವನ್ನು ನಿಯಂತ್ರಣ ಮಾಡಲು ಸರ್ಕಾರಿ ಅಧಿಕಾರಿಗಳ ಜೊತೆಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.


ಸರ್ಕಾರ ಹಾಗೂ ಸಂಘಸಂಸ್ಥೆಗಳು ಕೋವಿಡ್ ನಿಯಂತ್ರಣಕ್ಕೆ ಕೈಜೋಡಿಸುವ ಜೊತೆಗೆ ಜನರು ಕೂಡ ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ವಹಿಸಬೇಕು. ಸ್ವಚ್ಛತೆ, ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಕೂಡ ಆದ್ಯ ಕರ್ತವ್ಯವೆಂದು ತಿಳಿದು ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.


ಬಿಳಗುಂಬ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಇಂತಿಯಾಜ್ ಪಾಷಾ ಮಾತನಾಡಿ ಕೋವಿಡ್ ಎರಡನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಇಂತಹ ಸಂದರ್ಭದಲ್ಲಿ ವಿಕಲಚೇತನರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ವಿಕಲಚೇತನರಿಗೆ ದಿನಸಿ ಕಿಟ್ ಗಳನ್ನು ಅಮೃತ ವಿಕಲಚೇತನ ಟ್ರಸ್ಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದರು.


ಅಮೃತ ವಿಕಲಚೇತನ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್ ಮಾತನಾಡಿ ಅಮೃತ ವಿಕಲಚೇತನ ಟ್ರಸ್ಟ್ ಶೈಕ್ಷಣಿಕ, ಆರೋಗ್ಯ, ವಿಕಲಚೇತನರಿಗೆ ನೆರವು ಸೇರಿದಂತೆ ಸಾಮಾಜಿಕ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಈ ಹಿಂದೆಯೂ ಲಾಕ್ ಡೌನ್ ಸಂದರ್ಭದಲ್ಲಿ ನೆರವು ನೀಡಲಾಗಿತ್ತು. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ವಿಕಲಚೇತನರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಗುವುದು ಎಂದರು.

ಅಮೃತ ವಿಕಲಚೇತನ ಟ್ರಸ್ಟಿನ ಅಧ್ಯಕ್ಷ ಆರ್. ನಿರಂಜನ್, ಖಜಾಂಚಿ ಪಿ. ಸಪ್ನಾ, ಅಮೃತ ವಿಕಲಚೇತನ ವೃದ್ಧಾಶ್ರಮದ ಪಿ. ಭಾಸ್ಕರ್ ಇದ್ದರು. 40 ಕ್ಕೂ ಹೆಚ್ಚು ವಿಕಲಚೇತನರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑