Tel: 7676775624 | Mail: info@yellowandred.in

Language: EN KAN

    Follow us :


ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

Posted date: 24 Jun, 2021

Powered by:     Yellow and Red

ಸಂಭವನೀಯ ಕೋವಿಡ್ 3 ನೇ ಅಲೆ-ಮಕ್ಕಳ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಸಂಭವನೀಯ ಕೋವಿಡ್ 3 ನೇ ಅಲೆಯ ಸಂದರ್ಭದಲ್ಲಿ ಯಾವುದೇ ಮಕ್ಕಳಿಗೆ ತೊಂದರೆಯಾಗದಂತೆ ಹಾಗೂ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು  ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಸೂಚನೆ ನೀಡಿದರು.


  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮಕ್ಕಳ ತಜ್ಞರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಹಿನ್ನಲೆಯಲ್ಲಿ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು, ದಯಾನಂದ ಸಾಗರ ಮೆಡಿಕಲ್ ಕಾಲೇಜು, ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ನಿರಂತರ ಸಭೆ ಹಾಗೂ ಸಿದ್ಧತಾ ಕೆಲಸಗಳು ನಡೆಯಲಿದ್ದು ಎಲ್ಲರೂ ಸಹಕರಿಸಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದರು.


ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ 50 ಐ‌ಸಿಯು ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅವುಗಳ ಕಾರ್ಯನಿರ್ವಹಣೆ ಸೇರಿದಂತೆ ಬೇಕಿರುವ ಇನ್ನಿತರ ವೈದ್ಯಕೀಯ ಪರಿಕರಗಳ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು.


ತಾಲ್ಲೂಕುವಾರು ಮಕ್ಕಳ ಕೋವಿಡ್ ಕೇರ್ ಸೆಂಟರ್ ಗಳು ತೆರೆಯಲು ವ್ಯವಸ್ಥೆಯಾಗಬೇಕು. ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಮಕ್ಕಳ ಜೊತೆ ತಾಯಿ ಕೂಡ ಇರಬೇಕಾಗುತ್ತದೆ. ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ರೂಪರೇಷುಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.


ಕೋವಿಡ್ ಲಸಿಕೆಯನ್ನು ಮೊದಲು ತಾಯಂದಿರನ್ನು ಗುರುತಿಸಿ ನೀಡಬೇಕಿದೆ. ಇದರಿಂದ ಕೋವಿಡ್ ನಿಂದ ಮಕ್ಕಳನ್ನು ಆದಷ್ಟು ಮಟ್ಟಿಗೆ ರಕ್ಷಿಸಬಹುದು. ಮಕ್ಕಳ ಪೋಷಕರಿಗೆ ಮಕ್ಕಳಿಗೆ ಪೌಷ್ಠಿಕ ಆಹಾರ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ನೀಡುವಂತೆ ಜಾಗೃತಿ ಮೂಡಿಸಬೇಕು ಎಂದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ನಿರಂಜನ್, ಆರ್.ಸಿ.ಎಚ್.ಓ ಡಾ: ಪದ್ಮ, ಡಿ.ಎಸ್.ಓ ಡಾ:  ಕಿರಣ್ ಶಂಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಶಶಿಧರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑