Tel: 7676775624 | Mail: info@yellowandred.in

Language: EN KAN

    Follow us :


ಮೇಕೆದಾಟು ಯೋಜನೆ; ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ

Posted date: 15 Jul, 2021

Powered by:     Yellow and Red

ಮೇಕೆದಾಟು ಯೋಜನೆ; ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆ ಹಲವಾರು ಬಾರಿ ನಿಂತ ನೀರಾದಂತೆ, ನಿಂತಲ್ಲಿಯೇ ನಿಂತಿದೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲು ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ವತಿಯಿಂದ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ತಿಳಿಸಿದ್ದಾರೆ.


ರಾಮನಗರದ ಎಪಿಎಂಸಿ ಮಾರುಕಟ್ಟೆಯ ರೈತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡರು, ಆಗಸ್ಟ್‌ 3 ರಿಂದ 7ನೇ ತಾರೀಖಿನವರೆಗೆ ಬೃಹತ್ ಪಾದಯಾತ್ರೆ ಮಾಡಲಾಗುವುದು. ಕನಕಪುರದ ಮೇಕೆದಾಟಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ಈ ಪಾದಯಾತ್ರೆಯಲ್ಲಿ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಂದ ರೈತ ಮುಖಂಡರು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


ಇದೇ ವೇಳೆ ರಾಜ್ಯ ಸರಕಾರ ಮೇಕೆದಾಟು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿದರು. ರೈತ ಮುಖಂಡರಾದ ಕೆ. ಮಲ್ಲಯ್ಯ ಕಲ್ಪನಾ ಶಿವಣ್ಣ ಮುಂತಾದವರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.,

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑