Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

Posted date: 13 Aug, 2021

Powered by:     Yellow and Red

ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ ಡಾ ಅಶ್ವಥ್ ನಾರಾಯಣ

ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು  ಆಸ್ಪತ್ರೆಗಳಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ  ಮಾಡಿಕೊಳ್ಳಿ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ತಿಳಿಸಿದರು.


ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್, ಐ.ಸಿ.ಯು, ಆಕ್ಸಿಜನ್ ಘಟಕಗಳ ಮಾಹಿತಿ ಪಡೆದುಕೊಂಡ ನಂತರ ಕೋವಿಡ್ ಎರಡನೇ ಅಲೆಯಲ್ಲಿ ಯಾವುದಾದರೂ ತೊಂದರೆ ಕಂಡುಬಂದಿದ್ದು, ಅವುಗಳನ್ನು ಪರಿಹರಿಸಲು  ವೈದ್ಯರು ಚರ್ಚಿಸಬಹುದು. ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ ಸೌಲಭ್ಯಗಳನ್ನು ಒದಗಿಸಲು ಸದಾ ಸಿದ್ದವಿದೆ ಎಂದರು.


ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಮಾತನಾಡಿ ಜಿಲ್ಲೆಯಲ್ಲಿ 60 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ ಪ್ರತಿದಿನ ಸರಾಸರಿ 5 ರಿಂದ 6 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದೆ. ಪಾಸಿಟಿವಿಟಿ ದರ ಕಳದೆ‌ ಒಂದು ವಾರದಿಂದ ಶೇ 0.33 ಇದೆ ಎಂದರು.


 ವಾರಾಂತ್ಯದಲ್ಲಿ ಹೆಚ್ಚಿನ ಜನರು ಕೆಲವು‌ ಪ್ರವಾಸಿ ತಾಣದಲ್ಲಿ ಕಂಡುಬಂದಿದ್ದು‌ ಅಂತಹ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಶ್ರವಣ ಮಾಸದಲ್ಲಿ ಕೆಲವು ದೇವಸ್ಥಾನಗಳಲ್ಲಿ ಹೆಚ್ಚಿನ ಜನರು ಬರುವುದರಿಂದ ವಾರಾಂತ್ಯದಲ್ಲಿ ದೇವಸ್ಥಾನಗಳ ಪ್ರವೇಶ ಸಹ ನಿರ್ಬಂಧ ವಿಧಿಸಲು ಸಹ ಚಿಂತಿಸಲಾಗುತ್ತಿದೆ ಎಂದರು.


ಜಿಲ್ಲೆಯಲ್ಲಿ ಶೇ 55 ಜನರಿಗೆ ಮೊದಲ ಡೋಸ್ ಲಸಿಕೆ ಹಾಗೂ ಶೇ 38 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಹಾಗೂ ತಾಲ್ಲೂಕು ಹಂತದಲ್ಲಿ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಸಿ.ಎಸ್.ಆರ್ ಯೋಜನೆಯಡಿ ಆಕ್ಸಿಜನ್ ಬೆಡ್ ಗಳನ್ನು ಮಾಡಲಾಗುವುದು ಎಂದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ಆರ್.ಸಿ.ಹೆಚ್ ಅಧಿಕಾರಿ ಡಾ: ಪದ್ಮ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಶಶಿಧರ್, ಡಿ.ಎಲ್.ಓ ಡಾ: ಮಂಜುನಾಥ್, ಡಿ.ಎಸ್.ಓ ಡಾ: ಕಿರಣ್ ಶಂಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑