Tel: 7676775624 | Mail: info@yellowandred.in

Language: EN KAN

    Follow us :


ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್

Posted date: 26 Aug, 2021

Powered by:     Yellow and Red

ರಾಷ್ಟ್ರೀಯ ಹೆದ್ದಾರಿ 40 ಮೀ ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಹೈಕೋರ್ಟ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿ ಸರ್ಕಾರದ ಸುತ್ತೋಲೆಯನ್ನು ಎತ್ತಿ ಹಿಡಿದಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಆದೇಶಿಸಿತ್ತು.


ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ಕಟ್ಟಡವನ್ನು ನಿರ್ಮಿಸಲಾಗಿತ್ತು. ಕಟ್ಟಡ ನಿರ್ಮಾಣ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ ಈ ಆದೇಶವನ್ನು ಪ್ರಕಟಿಸಿದೆ.

60 ದಿನಗಳಲ್ಲಿ ಅತಿಕ್ರಮಿತ ಕಟ್ಟಡವನ್ನು ತೆರವುಗೊಳಿಸಬೇಕೆಂದು 4 ಮಂದಿ ಪ್ರತಿವಾದಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ ಬಗ್ಗೆಯೂ 15 ದಿನಗಳಲ್ಲಿ ಸತ್ಯ ಶೋಧನೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.


ಸದ್ಯ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೈವೇ ಕಾಮಗಾರಿ ನಡೆಯುತ್ತಿದ್ದು ಹಲವು‌ ಮಂದಿ ಅನಧಿಕೃತವಾಗಿ ಅಲ್ಲದೆ ಕಾನೂನುಬಾಹಿರವಾಗಿ ಕಟ್ಟಡ‌ ನಿರ್ಮಿಸುತ್ತಿದ್ದಾರೆ. ಅವರಿಗೆ ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತಿಗಳ ಮುಖ್ಯಾಧಿಕಾರಿಗಳು ಹಣ, ಅಮಿಷಗಳಿಗೆ ಒಳಗಾಗಿ ಅಕ್ರಮವಾಗಿ ಲೈಸನ್ಸ್ ನೀಡುತ್ತಿರುವುದು ಕಂಡು ಬಂದಿದೆ. ಅಂತಹ ಮಾಲೀಕರು ಹಾಗೂ ಅಧಿಕಾರಿಗಳಿಗೆ ಇದು ಎಚ್ಚರಿಕೆ ಗಂಟೆಯಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑